ಚಿತ್ರದುರ್ಗದಲ್ಲಿ ಧಾರಾಕಾರ ಮಳೆ – ಚಳ್ಳಕೆರೆ ತಾಲೂಕಿನ ವಿವಿಧೆಡೆ ಜಮೀನುಗಳು ಜಲಾವೃತ

Public TV
1 Min Read

ಚಿತ್ರದುರ್ಗ: ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಧಾರಾಕಾರ ಮಳೆ ಸುರಿದ ಪರಿಣಾಮ ಚಳ್ಳಕೆರೆ (Challakere) ತಾಲೂಕಿನ ವಿವಿಧೆಡೆ ಜಮೀನುಗಳು (Farms) ಜಲಾವೃತಗೊಂಡಿವೆ.

ಭಾರೀ ಮಳೆಗೆ ಚಿತ್ರದುರ್ಗ (Chitradurga) ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿಯ ರೈತ ಮಧು ಎಂಬವರ ಜಮೀನು ಜಲಾವೃತಗೊಂಡಿದೆ. ಅಡಿಕೆ, ತೆಂಗು, ಮೆಕ್ಕೆಜೋಳ, ತರಕಾರಿ ಬೆಳೆಗಳು ಜಲಾವೃತಗೊಂಡಿದ್ದು, ನಾಲ್ಕು ಎಕರೆಗೂ ಹೆಚ್ಚು ಜಮೀನು ಜಲಮಯವಾಗಿದೆ. ಇದನ್ನೂ ಓದಿ: ಬಾದಾಮಿಯಲ್ಲಿ ಸಿದ್ದರಾಮಯ್ಯ ಗೆದ್ದಿದ್ದು ಮತ ಖರೀದಿಯಿಂದ: ಸಿ.ಎಂ.ಇಬ್ರಾಹಿಂ ಆರೋಪ

ಇನ್ನು ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ರೈತ ದಯಾನಂದ ಎಂಬವರಿಗೆ ಸೇರಿದ ಐದು ಎಕರೆ ಮೆಕ್ಕೆಜೋಳ ಜಮೀನು ಕೂಡ ಜಲಾವೃತವಾಗಿದೆ. ಕೈಗೆ ಬಂದಿದ್ದ ಬೆಳೆ ಮಳೆರಾಯನ ಅವಕೃಪೆಯಿಂದ ಹಾನಿಯಾಗಿದೆ. ಅತಿವೃಷ್ಟಿಯಿಂದ ಚಳ್ಳಕೆರೆ ಭಾಗದ ರೈತರಿಗೆ ಸಂಕಷ್ಟ ಎದುರಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ರಣ ಮಳೆಗೆ ಕುಸಿದ ಗೋಡೆ – ಇಬ್ಬರು ಮಕ್ಕಳು ಸೇರಿ 7 ಮಂದಿ ದಾರುಣ ಸಾವು

Share This Article