ದೆಹಲಿ | ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ – ಮನೆ ಕುಸಿದು ನಾಲ್ವರು ಸಾವು, ರೆಡ್ ಅಲರ್ಟ್ ಘೋಷಣೆ

Public TV
1 Min Read

– 100ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವಿಳಂಬ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಇಂದು ಬೆಳಿಗ್ಗೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಮನೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿರುವ ಘಟನೆ ದ್ವಾರಕಾದ (Dwaraka) ನಜಾಫ್‌ಗಢ ಪ್ರದೇಶದಲ್ಲಿ ನಡೆದಿದೆ.ಇದನ್ನೂ ಓದಿ: ಸುಹಾಸ್‌ಗೆ ಆತ್ಮರಕ್ಷಣೆಗೆ ಒಂದು ದೊಣ್ಣೆಯನ್ನೂ ಇಟ್ಟುಕೊಳ್ಳಲು ಪೊಲೀಸರು ಅವಕಾಶ ನೀಡಲಿಲ್ಲ: ಹರೀಶ್ ಪೂಂಜಾ

ಬೆಳಗಿನ ಜಾವದಿಂದ ಭಾರೀ ಮಳೆ ಸುರಿಯುತ್ತಿದ್ದು, ಗಂಟೆಗೆ 80 ಕಿ.ಮೀ ವೇಗದಲ್ಲಿ ಗಾಳಿ ಬೀಸಿದ್ದು, ಪರಿಣಾಮ ಈ ಅವಘಡ ಸಂಭವಿಸಿದೆ. ಮರ ಉರುಳಿ ಬಿದ್ದ ಪರಿಣಾಮ ಮನೆ ಕುಸಿದಿದ್ದು, ಓರ್ವ ಮಹಿಳೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಜ್ಯೋತಿ (26) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದ್ವಾರಕಾ, ಗುರುಗ್ರಾಮ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಮರಗಳು ನೆಲಕ್ಕುರುಳಿವೆ.

ದೆಹಲಿಯ ಪ್ರಮುಖ ರಸ್ತೆಗಳಲ್ಲಿ ಅಗಾಧ ಪ್ರಮಾಣದ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಸದ್ಯ ಹವಾಮಾನ ಇಲಾಖೆ ರೆಡ್ ಅಲರ್ಟ್ (Red Alert) ಘೋಷಿಸಿದ್ದು, ಗಾಳಿಯ ತೀವ್ರತೆಯಿಂದಾಗಿ 100ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಈ ಕುರಿತು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Delhi International Airport) ಹಾಗೂ ಏರ್ ಇಂಡಿಯಾ (Air India) ವಿಮಾನ ವಿಳಂಬ, ಮಾರ್ಗ ಬದಲಾವಣೆ ಬಗ್ಗೆ ಮಾಹಿತಿ ಹಂಚಿಕೊಂಡಿವೆ.ಇದನ್ನೂ ಓದಿ: ಕರ್ನಾಟಕದ ಮರಾಠಿ ಮಾತನಾಡುವ ಪ್ರದೇಶಗಳು ಇನ್ನೂ ಮಹಾರಾಷ್ಟ್ರ ಭಾಗವಾಗಿಲ್ಲ: ಅಜಿತ್‌ ಪವಾರ್‌

Share This Article