ಧಾರಾಕಾರ ಮಳೆ – ಆ.20ರಂದು ಯಾವ್ಯಾವ ಜಿಲ್ಲೆಯ ಶಾಲೆಗೆ ರಜೆ?

Public TV
1 Min Read

ಉತ್ತರ ಕನ್ನಡ/ಬೆಳಗಾವಿ/ಧಾರವಾಡ: ರಾಜ್ಯದ ಕೆಲವೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಉತ್ತರ ಕನ್ನಡ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಕೆಲವು ತಾಲೂಕುಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ:
ಜಿಲ್ಲೆಯಲ್ಲಿ ಮಳೆಯಬ್ಬರ ಮುಂದುವರೆದ ಹಿನ್ನೆಲೆ ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ದಾಂಡೇಲಿ, ಜೋಯಿಡಾ ಹಾಗೂ ಶಿರಸಿ ತಾಲೂಕಿಗೆ ಶಾಲಾ-ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.ಇದನ್ನೂ ಓದಿ: ಕಳಸಾ ಬಂಡೂರಿ ಯೋಜನೆ ಮೂಲಕ ನಮ್ಮ ಪಾಲಿನ ನೀರು ಬಳಸಲು ರಾಜ್ಯಕ್ಕೆ ಸಂಪೂರ್ಣ ಹಕ್ಕಿದೆ: ಡಿಕೆಶಿ

ಧಾರವಾಡ:
ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಆ.20ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ ಹಾಗೂ ಶಾಲಾ-ಕಾಲೇಜು ಜೊತೆಗೆ ಪದವಿ ಮಹಾವಿದ್ಯಾಲಯಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ದಾರೆ.

ಬೆಳಗಾವಿ:
ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಜೊತೆಗೆ ಬೆಳಗಾವಿ ಜಿಲ್ಲೆಗೆ ಆ.20ರಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.ಇದನ್ನೂ ಓದಿ: ಕೇಂದ್ರದಿಂದ `ಆನ್‌ಲೈನ್ ಗೇಮಿಂಗ್ ತಡೆ’ ಮಸೂದೆಗೆ ಅನುಮೋದನೆ

Share This Article