ರಾಜ್ಯದಲ್ಲಿ ಆರಿದ್ರಾ ಮಳೆಯಬ್ಬರ – 93 ವರ್ಷಗಳ ಬಳಿಕ ಜೂನ್‌ನಲ್ಲೇ KRS 123 ಅಡಿ ಭರ್ತಿ

By
1 Min Read

ಬೆಂಗಳೂರು: ರಾಜ್ಯದಲ್ಲಿ ಆರಿದ್ರಾ ಮಳೆ ಅಬ್ಬರ ಜೋರಾಗಿದೆ. ಕಾವೇರಿ ಜಲಾನಯನ ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ, ಹಳೆ ಮೈಸೂರು ಭಾಗದ ಜೀವನಾಡಿ ಕನ್ನಂಬಾಡಿ ಅಣೆಕಟ್ಟು ಬಹುತೇಕ ಭರ್ತಿ ಆಗಿದೆ.

ಡ್ಯಾಂ ನಿರ್ಮಾಣವಾದ 93 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಜಲಾಶಯ ಭಾಗಶಃ ಭರ್ತಿ ಆಗಿದ್ದು, ಸೋಮವಾರ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ ಕೆಆರ್‌ಎಸ್ ಡ್ಯಾಂನ ಒಳಹರಿವು, ಹೊರಹರಿವು ಹೆಚ್ಚಾಗಿರುವುದರಿಂದ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ವ್ಯವಸ್ಥೆ ರದ್ದು ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಕೊಂಚಮಟ್ಟಿಗೆ ಮಳೆ ತಗ್ಗಿದ್ದರೂ ಕೂಡ ಅವಾಂತರಗಳೂ ಮಾತ್ರ ಮುಂದುವರೆದಿವೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದ ಬೆಳಗಾವಿ ಜಿಲ್ಲೆಯ ಸಪ್ತ ನದಿಗಳು ಉಕ್ಕಿ ಹರಿಯುತ್ತಿವೆ. ಆದ್ರೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದೆ. ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಐತಿಹಾಸಿಕ ಅಂಜನಾಪುರ ಜಲಾಶಯ ಭರ್ತಿಯಾಗಿದೆ.

Share This Article