ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರಗಳ ಕಾಲ ಮಳೆಯಾಗುವ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದ 24 ಜಿಲ್ಲೆಗಳಲ್ಲಿಯೂ ಸಾಧಾರಾಣ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗಲಿದ್ದು, ಚಿಕ್ಕಮಗಳೂರು, ಕೊಡಗು, ಮತ್ತು ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡಕ್ಕೂ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ತಮಿಳುನಾಡು, ಪುದುಚೇರಿ, ಕಾರಕಲೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶ, ಕರಾವಳಿ ಕರ್ನಾಟಕ, ಅಂಡಮಾನ್- ನಿಕೋಬಾರ್, ಕೇರಳ, ಲಕ್ಷದ್ವೀಪ, ಒಡಿಶಾ ರಾಜ್ಯಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.

