ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ

Public TV
0 Min Read

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಶುಕ್ರವಾರದಿಂದ ಮಳೆಯ ಆರ್ಭಟ ಜೋರಾಗಿದೆ. ಕಳೆದ ರಾತ್ರಿಯಿಂದಲೂ ಧಾರಾಕಾರ ಮಳೆಯಾಗುತ್ತಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಮುಂಗಾರು ಮಳೆಯ ಆರ್ಭಟ ಕಡಿಮೆಯಾಗಿದ್ದರೂ ಕೂಡ ಶುಕ್ರವಾರದಿಂದ ವರುಣ ಅಬ್ಬರಿಸುತ್ತಿದ್ದಾನೆ. ಮಳೆಯಿಂದಾಗಿ ಬೆಳಗ್ಗೆ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿತ್ತು.

ಮಡಿಕೇರಿ ನಗರದಾದ್ಯಂತ ಮಂಜು ಕವಿದ ವಾತಾವರಣದ ಜೊತೆಗೆ ಮಳೆ ಸುರಿಯುತ್ತಿದ್ದು, ಇಡೀ ನಗರವೇ ಮಂಜಿನಿಂದ ತೋಯ್ದು ಹೋಗಿದೆ. ನಿರಂತರ ಮಳೆಯಿಂದಾಗಿ ರಸ್ತೆಯಲ್ಲಿ ನೀರು ನೀರು ನಿಂತು ವಾಹನ ಸವಾರರು ಪರದಾಡುತ್ತಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *