ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ – ಹಾಸನದ ಕೆಲವು ತಾಲೂಕಿನ, ಉಡುಪಿಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

Public TV
1 Min Read

ಹಾಸನ/ಉಡುಪಿ: ಮಳೆಯ (Rain) ಅಬ್ಬರ ಹೆಚ್ಚಾದ ಹಿನ್ನೆಲೆ ಹಾಸನ (Hassan) ಜಿಲ್ಲೆಯ ಸಕಲೇಶಪುರ, ಅರಕಲಗೂಡು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (School) ರಜೆ ಘೋಷಣೆ ಮಾಡಲಾಗಿದೆ.

ಆಲೂರು ತಾಲೂಕಿನ ಪಾಳ್ಯ, ಕೆಂಚಮ್ಮನ ಹೊಸಕೋಟೆ ಹೋಬಳಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಬೇಲೂರು ತಾಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಮಳೆ ಅವಾಂತರ – ಈವರೆಗೂ 260ಕ್ಕೂ ಅಧಿಕ ಮಂದಿ ಸಾವು

ಉಡುಪಿ (Udupi) ಜಿಲ್ಲೆಯಲ್ಲೂ ಧಾರಾಕಾರ ಮಳೆ ಮುಂದುವರಿದಿದ್ದು, ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ, ಪಿಯುಸಿ, ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ವಿಲ್ಸನ್ ಗಾರ್ಡನ್ ನಿಗೂಢ ಬ್ಲಾಸ್ಟ್ – ಗಾಯಗೊಂಡಿದ್ದ ತಾಯಿ, ಮಗಳು ಸಾವು

Share This Article