Rain Alert: ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲೂ ಭಾರೀ ಮಳೆ ಸಾಧ್ಯತೆ

Public TV
1 Min Read

ಬೆಂಗಳೂರು: ರೌದ್ರ ರೂಪ ತಾಳಿದ ಮಿಂಚಾಂಗ್‌ ಚಂಡ ಮಾರುತಕ್ಕೆ ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಈ ಬೆನ್ನಲ್ಲೇ ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮಿಚಾಂಗ್‌ ಚಂಡ ಮಾರುತದ ಎಫೆಕ್ಟ್‌ನಿಂದ ರಾಜ್ಯದಲ್ಲೂ ಮೋಡ ಕವಿವ ವಾತಾವರಣ ಇದೆ. ಅಲ್ಲಲ್ಲಿ ಮಳೆ ಹನಿಗಳು ಬೀಳುತ್ತಿದ್ದು ಚಳಿಯ ವಾತಾವರಣ ಸೃಷ್ಟಿಸಿದೆ. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಆರೋಪ ಸತ್ಯಕ್ಕೆ ದೂರವಾದದ್ದು: ಚನ್ನರಾಜ ಹಟ್ಟಿಹೊಳಿ

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಮಳೆ ಸಾಧ್ಯತೆಯಿದೆ. ಬೆಂಗಳೂರಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ನಗರದಲ್ಲಿಂದು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮುಂದಿನ 24 ಗಂಟೆಗಳ ನಂತರ ಈ ತಾಪಮಾನ ಬದಲಾಗಲಿದ್ದು, ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ಗೆ ಬರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್ – ಮನೆಯ 2ನೇ ಯಜಮಾನರ ಖಾತೆಗೆ ಅನ್ನಭಾಗ್ಯ ಹಣ

ಮಿಚಾಂಗ್‌ ಚಂಡಮಾರುತದಿಂದ ಕಳೆದ 80 ವರ್ಷಗಳಲ್ಲಿ ಕಂಡು ಕೇಳರಿಯದಂತಹ ಮಳೆಯಾಗಿದೆ. ಬಿರುಗಾಳಿ ಸಹಿತ ಭಾರೀ ಮಳೆಗೆ ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಅನೇಕ ರಸ್ತೆಗಳು ಜಲಾವೃತಗೊಂಡಿವೆ. ಬಿಟ್ಟುಬಿಡದೇ ಸುರಿತಿರೋ ಮಳೆಯ ಪರಿಣಾಮ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಚೆನ್ನೈನಲ್ಲಿ 6 ಮಂದಿ ಬಲಿಯಾಗಿದ್ದು, ನೀರುಪಾಲಾಗ್ತಿದ್ದ 20ಕ್ಕೂ ಹೆಚ್ಚು ಜನರನ್ನು ರಕ್ಷಣಾ ಪಡೆಗಳು ಕಾಪಾಡಿವೆ. ನಗರದ 14 ರೈಲ್ವೇ ಸಬ್‌ವೇಗಳು ಬಂದ್ ಆಗಿವೆ. ರೈಲು-ವಿಮಾನ-ರಸ್ತೆ ಸಂಚಾರದಲ್ಲಿ ತೀವ್ರ ವ್ಯತ್ಯಯವಾಗಿವೆ.. ಚೆನ್ನೈ ವಿಮಾನ ನಿಲ್ದಾಣದಲ್ಲಿ ನೀರು ಆವರಿಸಿದೆ. ಪ್ರಮುಖ ರಸ್ತೆಗಳು ಜಲಮಯವಾಗಿವೆ. ಇದನ್ನೂ ಓದಿ: ನಿಮ್ಗೂ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು, ಅನ್ಯಾಯ ಆಗೋಕೆ ಬಿಡಲ್ಲ – ಮುಸ್ಲಿಂ ಸಮಾವೇಶದಲ್ಲಿ ಸಿಎಂ ಅಭಯ

Share This Article