– ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಬೆಂಗಳೂರು: ದೀಪಾವಳಿಯ (Deepavali) ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದ್ದು ಮಧ್ಯಾಹ್ನ ಅಥವಾ ಸಂಜೆ ಮಳೆ ಸುರಿಯುವ ಸಾಧ್ಯತೆಯಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಇದನ್ನೂ ಓದಿ: ನಾಡಿನಾದ್ಯಂತ ದೀಪಾವಳಿ ಸಂಭ್ರಮ – ಕೆಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ
ಗಾಳಿಯು ಗಂಟೆಗೆ 30-40ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.