ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Public TV
1 Min Read

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  (IMD) ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.ಇದನ್ನೂ ಓದಿ: ಪ್ರವಾಹದಲ್ಲಿ ಸಿಲುಕಿದ್ದ 22 ಸಿಆರ್‌ಪಿಎಫ್‌ ಸಿಬ್ಬಂದಿ ರಕ್ಷಿಸಿದ ಸೇನಾ ಹೆಲಿಕಾಪ್ಟರ್‌

ಬೀದರ್ ಜಿಲ್ಲೆಗೆ ಮುಂದಿನ 3 ದಿನ ಯೆಲ್ಲೋ ಅಲರ್ಟ್:
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇಂದು ಕೂಡು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೀದರ್, ಔರಾದ್, ಭಾಲ್ಕಿ, ಹುಮ್ನಾಬಾದ್, ಬಸವಕಲ್ಯಾಣ ಸೇರಿದಂತೆ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅಬ್ಬರದ ಮಳೆಗೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಸತತ ಮಳೆಯಿಂದಾಗಿ ಜಮೀನುಗಳು ಜಲಾವೃತಗೊಂಡು, ರಾಶಿಗೆ ಬಂದಿದ್ದ ಬೆಳೆ ಹಾಳಾಗುವ ಭೀತಿಯಲ್ಲಿ ಅನ್ನದಾತರು ಪರದಾಡುವಂತಾಗಿದೆ.ಇದನ್ನೂ ಓದಿ: ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ – ನನಗೂ ಬೈರತಿ ಬಸವರಾಜ್‌ಗೂ ಸಂಬಂಧವಿಲ್ಲ ಎಂದ ಎ1 ಜಗ್ಗ

Share This Article