4 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ – ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Public TV
1 Min Read

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru) ಸೇರಿ ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ.

ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಇದನ್ನೂ ಓದಿ: ಕೈಕೊಟ್ಟ ವರುಣ – ಮಳೆಗಾಗಿ ನಾಳೆ KRSನಲ್ಲಿ ವಿಶೇಷ ಹೋಮ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆಯಾಗಲಿದೆ.

ರಾಜ್ಯದ ಕೆಲವೆಡೆ ಗುಡುಗು, ಮಿಂಚು ಬಿರುಗಾಳಿಯೊಂದಿಗೆ ಮಳೆ ಸುರಿಯಲಿದೆ. ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಸಾಗುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು (Fisherman) ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Share This Article