ರಾಜ್ಯದ ವಿವಿಧೆಡೆ ಮುಂದಿನ 3 ಗಂಟೆಯ ಒಳಗೆ ಭಾರೀ ಮಳೆಯ ಎಚ್ಚರಿಕೆ

Public TV
1 Min Read

– 9 ಜಿಲ್ಲೆಯ ಶಾಲೆಗಳಿಗೆ ಇಂದು ರಜೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ದಾವಣಗೆರೆ, ಕೋಲಾರ ಹಾಗೂ ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಬಲಿ – ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ

ತಮಿಳುನಾಡಿನಲ್ಲಿ ಫೆಂಗಲ್ ಚಂಡುಮಾರುತದ ಪರಿಣಾಮ ಸೋಮವಾರ ತಡರಾತ್ರಿ 1:30ವರೆಗೂ ಸಿಲಿಕಾನ್ ಸಿಟಿ ಬೆಂಗಳೂರಿನ ಅನೇಕ ಕಡೆ ಮಳೆಯಾಗಿತ್ತು. ಜೋರು ಮಳೆಯಾದ ಪರಿಣಾಮ ರಸ್ತೆಗಳು ಕೆರೆಯಂತಾಗಿದೆ. ಇಂದು ಸಹ ರಾಜ್ಯದ ಅನೇಕ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಲಕ್ಷಣಗಳು ಹೆಚ್ಚಾಗಿದೆ. ಇನ್ನೂ ಮಳೆಯ ಹಿನ್ನೆಲೆ ರಾಜ್ಯದ 9 ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಒಟ್ಟು 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: We Have An Agreement – ಸಿಎಂ ಹುದ್ದೆ ಒಪ್ಪಂದದ ಬಗ್ಗೆ ಡಿಕೆಶಿ ಮೌನ ಮುರಿದ್ರಾ?

Share This Article