ಭಾರೀ ಮಳೆ- ದಕ್ಷಿಣ ಕನ್ನಡದ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Public TV
0 Min Read

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಉಳ್ಳಾಲ, ಬಂಟ್ವಾಳ, ಕಡಬ (Ullala, Bantwala, Kadaba) ತಾಲೂಕಿನ ಶಾಲೆಗಳಿಗೆ ರಜೆ (Holiday) ಘೋಷಣೆ ಮಾಡಲಾಗಿದೆ.

ಮೂರು ತಾಲೂಕಿನ ತಹಶೀಲ್ದಾರ್ ಅವರು ಅಂಗನವಾಡಿಯಿಂದ ಪ್ರೌಢಶಾಲೆಯವರೆಗೆ ರಜೆ ಘೋಷಣೆ ಮಾಡಿ ಆದೇಶ ಪ್ರಕಟಿಸಿದ್ದಾರೆ.  ಇದನ್ನೂ ಓದಿ: ಮಡಿಕೇರಿ | ಮಳೆ ಹಿನ್ನೆಲೆ ಭಾರೀ ವಾಹನಗಳಿಗೆ ನಿಷೇಧ ಆದೇಶ ಉಲ್ಲಂಘಿಸಿದ 12 ಲಾರಿಗಳು ವಶಕ್ಕೆ

ದಕ್ಷಿಣ ಕನ್ನಡದಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸಲಿದ್ದು ಬಿರುಗಾಳಿ ಸಹಿತ ಮಳೆಯಾಗಲಿದೆ.

Share This Article