ಹಾವೇರಿ: ಜಿಲ್ಲೆಯ ರಾಣೇಬೆನ್ನೂರು (Ranebennur) ನಗರದಲ್ಲಿ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ (Rain) ಹಲವೆಡೆ ವಿದ್ಯುತ್ ಕಂಬಗಳು (Electric Poles) ನೆಲಕ್ಕುರುಳಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ರಾಣೇಬೆನ್ನೂರಿನ ಗೌರಿಶಂಕರ ನಗರದಲ್ಲಿ ಮಳೆ ಸುರಿದ ಪರಿಣಾಮ ರಸ್ತೆಯ ಮೇಲೆ ಹಾಗೂ ಮನೆಯ ಮುಂಭಾಗ ಮರಗಳು ಹಾಗೂ ವಿದ್ಯುತ್ ಕಂಬಗಳು ಬಿದ್ದಿವೆ. ಮಳೆ ಬೀಳುವ ಸಮಯದಲ್ಲಿ ಜನರು ಇಲ್ಲದಿದ್ದರಿಂದ ಭಾರೀ ಅನಾಹುತಗಳು ತಪ್ಪಿವೆ. ವಿದ್ಯುತ್ ಕಂಬಗಳು ಬಿದ್ದ ಹಿನ್ನೆಲೆ ವಿದ್ಯುತ್ ವ್ಯತ್ಯಯ ಉಂಟಾಗಿ ಜನರಿಗೆ ಸಮಸ್ಯೆ ಉಂಟಾಯಿತು. ಅಲ್ಲದೆ ರಸ್ತೆಗಳ ಮೇಲೆ ಕಂಬಗಳು ಬಿದ್ದಿರುವುದರಿಂದ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು. ಇದನ್ನೂ ಓದಿ: ತಮಿಳುನಾಡಿನಲ್ಲಿ ಎನ್ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ
ಕೂಡಲೇ ವಿದ್ಯುತ್ ಇಲಾಖೆಯ ಸಿಬ್ಬಂದಿ ತುರ್ತು ದುರಸ್ತಿ ಕಾರ್ಯ ಮಾಡಿದ್ದಾರೆ. ಅಲ್ಲದೆ ನಗರದ ಗಡಾದ ಆಸ್ಪತ್ರೆ ಬಳಿ ಮರದ ಕೆಳಗೆ ನಿಲ್ಲಿಸಿದ ಆಟೋ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಆಟೋ (Auto) ಸಂಪೂರ್ಣ ಜಖಂಗೊಂಡಿದೆ. ಮಳೆ ಬಂದ ಸಮಯದಲ್ಲಿ ಆಟೋ ಮಾಲೀಕ ಆಟೋವನ್ನು ಮರದ ಕೆಳಗೆ ನಿಲ್ಲಿಸಿದ್ದರು. ಈ ಸಮಯದಲ್ಲಿ ಬಾರಿ ಗಾಳಿಮಳೆಗೆ ಮರ ಬಿದ್ದಿದೆ. ಇದರಿಂದ ಆಟೋ ಕಳೆದುಕೊಂಡ ಮಾಲೀಕ ಜಬೀಯುಲ್ಲಾ ಕಂಗಾಲಾಗಿದ್ದಾರೆ. ಇದನ್ನೂ ಓದಿ: ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

