ಉತ್ತರ ಕರ್ನಾಟಕದ ಹಲವೆಡೆ ಭಾರೀ ಮಳೆ – ಜನಜೀವನ ಅಸ್ತವ್ಯಸ್ತ

Public TV
1 Min Read

ಬೀದರ್/ಕೊಪ್ಪಳ/ವಿಜಯಪುರ: ಉತ್ತರ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಗಡಿ ಜಿಲ್ಲೆ ಬೀದರ್‌ನಲ್ಲಿ ಸತತ ಒಂದು ಗಂಟೆಯಿಂದ ಭಾರೀ ಮಳೆಯಾಗುತ್ತಿದ್ದು, ಗುಡುಗು, ಸಿಡಿಲು ಸಹಿತ ವರುಣ ಅಬ್ಬರಿಸುತ್ತಿದ್ದಾನೆ. ಬೀದರ್, ಬಸವಕಲ್ಯಾಣದಲ್ಲಿ, ಕಮಲನಗರ್, ಭಾಲ್ಕಿ ಸೇರಿದಂತೆ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಇದನ್ನೂ ಓದಿ: ಆಪರೇಷನ್‌ ಸಿಂಧೂರ ಬಳಿಕ ಮೊದಲ ಬಾರಿಗೆ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ

ಬೀದರ್ ಚಿದ್ರಿ, ಮೇಲೂರು ಕಾಲೋನಿಯ ಮನೆಗಳಿಗೆ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಯಾಗಿದೆ. ಗುಂಪಾ ರಸ್ತೆ, ಏರ್‌ಪೋರ್ಟ್ ರಸ್ತೆ, ಹೈದ್ರಾಬಾದ್ ರಸ್ತೆಗಳು ಕೆರೆಯಂತಾಗಿವೆ. ವಾಹನ ಚಾಲಕರು ಪರದಾಡುತ್ತಿದ್ದು, ತಳ್ಳಿಕೊಂಡು ಹೋಗುವ ಪರಿಸ್ಥಿತಿ ಬಂದಿದೆ.

ವಿಜಯಪುರ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಗುಡುಗು, ಸಿಡಿಲು ಸಮೇತ ವರುಣ ಆರ್ಭಟ ಜೋರಾಗಿದೆ. ಇನ್ನೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ಭಾರೀ ಮಳೆಯಾಗಿ ರಸ್ತೆಗಳು ಜಲಾವೃತಗೊಂಡಿವೆ.ಇದನ್ನೂ ಓದಿ: CRPF ಮಹಿಳೆ ಮನೆಯಲ್ಲಿ ಚಿನ್ನಾಭರಣ ಕಳ್ಳತನ – ದೂರು ಕೊಟ್ರೂ ಕ್ರಮವಿಲ್ಲ ಅಂತ ಕಣ್ಣೀರು

Share This Article