ಬೆಂಗ್ಳೂರು ಸೇರಿ ಹಲವೆಡೆ ಭಾರೀ ಮಳೆ – ಧರೆಗುರುಳಿದ ಬೃಹತ್ ಮರ

Public TV
0 Min Read

ಬೆಂಗಳೂರು: ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವೆಡೆ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ.

ಬೆಂಗಳೂರಿನ (Bengaluru) ರಾಜಾಜಿನಗರ (Rajaji Nagar) 4ನೇ ಬ್ಲಾಕ್‌ನಲ್ಲಿ ಬೃಹತ್ ಮರವೊಂದು ಧರೆಗುರುಳಿದ್ದು, ಐದು ಕಾರ್, ಟಾಟಾ ಏಸ್, ಮೂರ್ನಾಲ್ಕು ಬೈಕ್ ಹಾಗೂ ಎರಡು ಮನೆಗಳ ಮನೆ ಬಿದ್ದಿದೆ. ಚಂದ್ರಮ್ಮ ಹಾಗೂ ಪೀಟರ್ ಎಂಬುವರ ಮನೆಗೆ ದಿಗ್ಭಂಧನ ಹಾಕಿದಂತಾಗಿದ್ದು, ಪರಿಣಾಮ ಮನೆಯಿಂದ ಹೊರಬರಲಾರದೆ ಅಸಹಾಯಕ ಸ್ಥಿತಿಯಲ್ಲಿದ್ದಾರೆ.ಇದನ್ನೂ ಓದಿ: ವಿದೇಶಕ್ಕೆ ಅನ್ನಭಾಗ್ಯ ಅಕ್ಕಿ ಸಾಗಣೆ; ವಾಹನಗಳಿಗೆ GPS ಟ್ರ್ಯಾಕರ್, ಗೋದಾಮುಗಳಿಗೆ ಸಿಸಿಟಿವಿ ಅಳವಡಿಕೆಗೆ ಸಿಎಂ ಸೂಚನೆ

ಈ ಬಗ್ಗೆ ಮಾಹಿತಿ ನೀಡಿದರೂ ಕೂಡ ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ಬಾರದೇ ನಿರ್ಲಕ್ಷಿಸಿದ್ದಾರೆ. ವಿದ್ಯತ್‌ ಕಂಬ ಕೂಡ ಬಾಗಿದ್ದು, ಬೆಸ್ಕಾಂ ಸಿಬ್ಬಂದಿ ಕರೆಂಟ್ ಸಂಪರ್ಕವನ್ನು ಕೂಡ ಕಡಿತಗೊಳಿಸಿಲ್ಲ.

ಇನ್ನೂ ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಳೆ ಕೊಂಚ ಬಿಡುವು ನೀಡಿತ್ತು. ಇದೀಗ ಮತ್ತೆ ಮಳೆ ಚುರುಕಾಗಿದ್ದು, 8  ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಮಂಡ್ಯ, ಮೈಸೂರು, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಕೂಡ ಬುಧವಾರ ರಾತ್ರಿಯಿಂದ ಗುರುವಾರ ಬೆಳಗ್ಗೆಯವರೆಗೂ ಗುಡುಗು ಸಹಿತ ಮಳೆಯಾಗಿದೆ. ಎಚ್​​ಎಎಲ್​​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29.6 ಡಿಗ್ರಿ ಸೆಲ್ಸಿಯಸ್ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಇದನ್ನೂ ಓದಿ: ನೇಪಾಳ ಹಿಂಸಾಚಾರಕ್ಕೆ ಸ್ಥಗಿತಗೊಂಡಿದ್ದ ಕಠ್ಮಂಡು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಓಪನ್

Share This Article