ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ – ಹಲವು ಕಡೆ ಗುಡ್ಡ ಕುಸಿತ, ಸಂಚಾರ ಅಸ್ತವ್ಯಸ್ತ

Public TV
1 Min Read

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಇಂದು ಯೆಲ್ಲೋ ಅಲರ್ಟ್ ನೀಡಿದೆ. ಜೊತೆಗೆ ಮೀನುಗಾರರಿಗೆ ಜುಲೈ 09ರ ವರೆಗೆ ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ.

ಈಗಾಗಲೇ ಕಡಲ ಭಾಗದಲ್ಲಿ 5.5 ಮಿಲಿ ಮೀಟರ್‌ನಷ್ಟು ಎತ್ತರದ ಅಲೆಗಳು ಏಳುತ್ತಿದ್ದು, 55 ರಿಂದ 65 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಜಿಲ್ಲೆಯ ಕಾರವಾರದಲ್ಲಿ ಅತಿಹೆಚ್ಚು ಮಳೆ (Rain) ಬೀಳುತ್ತಿದ್ದು, ಚಂಡಿಯಾ ಗ್ರಾಮ ಇಡೂರು ಭಾಗದಲ್ಲಿ ರಸ್ತೆ, ಕೃಷಿ ಭೂಮಿ ಜಲಾವೃತವಾಗಿದೆ. ಇನ್ನು ಇಲ್ಲಿನ 20 ಮನೆಗಳು ಜಲಾವೃತದ ಭೀತಿಯಲ್ಲಿದೆ. ಇದನ್ನೂ ಓದಿ: ಹಾಸನದಲ್ಲಿ ಶಂಕಿತ ಡೆಂಗ್ಯೂಗೆ ಯುವತಿ ಬಲಿ

ಹೊನ್ನಾವರ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ನಲ್ ಹಿಲ್ ಗುಡ್ಡ ಕುಸಿದಿದೆ. ರಸ್ತೆಯ ಮೇಲೆ ಮಣ್ಣು ಬಿದ್ದು ಒಂದು ಕಡೆಯಿಂದ ಮಾತ್ರ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಐಆರ್‌ಬಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಇನ್ನೊಂದು ಗಂಟೆಯಲ್ಲಿ ರಸ್ತೆ ಸಂಚಾರ ಸುಗಮವಾಗಲಿದೆ. ಇದನ್ನೂ ಓದಿ: ಡೆಂಗ್ಯೂ ಅಬ್ಬರದ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ

ಇನ್ನು ಯಲ್ಲಾಪುರ ಭಾಗದ ರಾಷ್ಟ್ರೀಯ ಹೆದ್ದಾರಿ 63ರ ಅರೆಬೈಲ್ ಘಟ್ಟದಲ್ಲಿ ಹೆದ್ದಾರಿ ಮೇಲೆ ಮರ ಬಿದ್ದು ಸಂಚಾರಕ್ಕೆ ಸಮಸ್ಯೆಯಾಗಿದ್ದು, ಇದೀಗ ಹೆದ್ದಾರಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 9 ಕಾಳಜಿ ಕೇಂದ್ರ ತೆರೆಯಲಾಗಿದ್ದು, ಸದ್ಯ ನದಿ ಪಾತ್ರದ ಭಾಗದಲ್ಲಿ ಮಳೆಯ ನೀರು ಕಮ್ಮಿಯಾಗಿದ್ದರಿಂದ ಕಾಳಜಿ ಕೇಂದ್ರದಲ್ಲಿ 25 ಜನ ಮಾತ್ರ ಆಶ್ರಯ ಪಡೆದಿದ್ದಾರೆ. ಸದ್ಯ ಮಲೆನಾಡು ಭಾಗದ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗದಲ್ಲಿ ಸಹ ಉತ್ತಮ ಮಳೆಯಾಗುತ್ತಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಇದನ್ನೂ ಓದಿ:  ಗದಗದಲ್ಲಿ ಡೆಂಗ್ಯೂಗೆ 5 ವರ್ಷದ ಬಾಲಕ ಬಲಿ

Share This Article