ರಾಯಚೂರು: ಸಿಂಧನೂರು ತಾಲೂಕಿನ ಕೋಳಬಾಳ ಗ್ರಾಮದ ರಸ್ತೆ ಭಾರೀ ಮಳೆಗೆ ಕೊಚ್ವಿ ಹೋಗಿದೆ. ಕಳೆದ ಮೂರು ದಿನಗಳಲ್ಲಿ ಸುರಿದ ಮಳೆಯಿಂದಾಗಿ ರಸ್ತೆ ಸಂಪೂರ್ಣ ಹಾಳಾಗಿದೆ.
14 ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಮಾರ್ಗ ಈಗ ಸಂಪೂರ್ಣ ಬಂದ್ ಆಗಿದೆ. ಕೆಸರು ಗದ್ದೆಯಾಗಿರುವ ರಸ್ತೆಯಲ್ಲಿ ವಾಹನಗಳು ಸಿಲುಕಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ. ಶಾಲಾ ಮಕ್ಕಳು ಕೆಸರಿನಲ್ಲೆ ಮನೆಯಿಂದ ಶಾಲೆಗೆ ಹೋಗುವಂತ ಪರಸ್ಥಿತಿಯಿದೆ.
ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಕೋಳಬಾಳ ಗ್ರಾಮದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿದೆ. ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ರಸ್ತೆ ಸುಧಾರಿಸುವ ಭರವಸೆ ನೀಡಿ ನಿರ್ಲಕ್ಷ್ಯವಹಿಸಿದ್ದಾರೆ ಅಂತ ಗ್ರಾಮಸ್ಥರು ಆರೋಪಿಸಿದ್ದಾರೆ.
ಎಷ್ಟು ಬಾರಿ ಮನವಿ ಸಲ್ಲಿಸಿದರು ಶಾಸಕರು ಹಾಗೂ ಅಧಿಕಾರಿಗಳು ರಸ್ತೆ ಕಡೆ ಗಮನ ಹರಿಸದಿರುವುದರಿಂದ ಈ ಅವ್ಯವಸ್ಥೆಗೆ ಕಾರಣ ಎಂದು ಗ್ರಾಮಸ್ಥರು ಹೇಳುತ್ತಾರೆ.