ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೋರೆನ್‌ಗೆ 1 ದಿನ ನ್ಯಾಯಾಂಗ ಬಂಧನ

By
1 Min Read

ರಾಂಚಿ: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ED) ಯಿಂದ ಬಂಧಿತರಾಗಿರುವ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೋರೆನ್‌ (Hemanth Soren) ಅವರನ್ನು 1 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ ಬಳಿಕ ಹೇಮಂತ್‌ ಸೋರೆನ್‌ ಅವರನ್ನು ಬುಧವಾರ ಸಂಜೆ ಬಂಧಿಸಲಾಗಿತ್ತು. ಬಳಿಕ ಇಂದು ಮಧ್ಯಾಹ್ನ ಅವರನ್ನು ರಾಂಚಿಯ PMLA ಕೋರ್ಟಿಗೆ ಹಾಜರುಪಡಿಸಲಾಯಿತು.

ವಕೀಲ ಮನೀಶ್ ಸಿಂಗ್ ಪ್ರತಿಕ್ರಿಯಿಸಿ, ಹೇಮಂತ್ ಸೊರೆನ್ ಅವರನ್ನು ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 10 ದಿನಗಳ ಕಸ್ಟಡಿಗೆ ಬೇಡಿಕೆ ಸಲ್ಲಿಸಲಾಗಿತ್ತು. ನಾಳೆ ಮುಂದಿನ ವಿಚಾರಣೆ ನಡೆಯಲಿದೆ ಎಂದರು. ಇದನ್ನೂ ಓದಿ: ಹೇಮಂತ್‌ ಸೋರೆನ್‌ ತಂದೆಯೂ ಹಿಂದೆ ಜೈಲುಪಾಲು!

ಬುಧವಾರ ಭಾರೀ ಭದ್ರತೆ ನಡುವೆ ರಾಂಚಿಯ ಸಿಎಂ ನಿವಾಸಕ್ಕೆ ಬಂದ ಇಡಿ ಅಧಿಕಾರಿಗಳು ಹೇಮಂತ್ ಸೋರೆನ್‌ಗೆ ಪ್ರಶ್ನೆಗಳನ್ನು ಕೇಳಿದ್ದರು. ಸತತ 8 ಗಂಟೆಯ ವಿಚಾರಣೆಯ ಬಳಿಕ ಇಡಿ ಬಂಧಿಸಿತ್ತು. ಮುಂಜಾಗ್ರತಾ ಕ್ರಮವಾಗಿ ರಾಂಚಿಯಲ್ಲಿ ಭದ್ರತೆಗೆ 7ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು.

ಈ ನಡುವೆ ಹೇಮಂತ್‌ ಸೋರೆನ್‌ ಅವರು ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸಕ್ಕೆ ಸೋಮವಾರ ಅಧಿಕಾರಿಗಳು ದಾಳಿ ನಡೆಸಿದ್ದರ ಕುರಿತು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ರಾಂಚಿಯಲ್ಲಿ ಎಫ್‌ಐಆರ್ ದಾಖಲು ಮಾಡಿದ್ದಾರೆ.

 

Share This Article