ಶಿವಣ್ಣನಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ‘ಸಪ್ತಸಾಗರದಾಚೆ ಎಲ್ಲೋ’ ಡೈರೆಕ್ಟರ್

Public TV
1 Min Read

‘ಸಪ್ತಸಾಗರದಾಚೆ ಎಲ್ಲೋ’ ಚಿತ್ರದ ನಿರ್ದೇಶನದ ಮೂಲಕ ಗಮನ ಸೆಳೆದಿರುವ ಹೇಮಂತ್ ರಾವ್ ಅವರ ಮುಂದಿನ ಚಿತ್ರದ ಬಗ್ಗೆ ಇದೀಗ ಅಪ್‌ಡೇಡ್ ಸಿಕ್ಕಿದೆ. ಪ್ರಿಯಾ-ಮನು ಕಥೆ ಹೇಳಿ ಗೆದ್ದಿದ್ದ, ಹೇಮಂತ್ ರಾವ್‌ಗೆ ಅಪಾರ ಅಭಿಮಾನಿಗಳ ಬಳಗವಿದೆ. ಇದೀಗ ಶಿವಣ್ಣನಿಗೆ ನಿರ್ದೇಶನ ಮಾಡಲು ಸಜ್ಜಾಗುವ ಮೂಲಕ ಫ್ಯಾನ್ಸ್‌ಗೆ ಹ್ಯಾಪಿ ನ್ಯೂಸ್ ಕೊಟ್ಟಿದ್ದಾರೆ.

‘ಗೋಧಿಬಣ್ಣ ಸಾಧಾರಣ ಮೈಕಟ್ಟು’, ‘ಕವಲುದಾರಿ’ ಖ್ಯಾತಿಯ ಹೇಮಂತ್ ರಾವ್ ಅವರು ತಮ್ಮ ಮುಂದಿನ ಚಿತ್ರಕ್ಕೆ ಶಿವಣ್ಣನಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಶಿವಣ್ಣನಿಗೆ ಈಗಾಗಲೇ ಕಥೆ ಹೇಳಿದ್ದು, ಸಿನಿಮಾ ಮಾಡಲು ಒಪ್ಪಿಗೆ ನೀಡಿದ್ದಾರಂತೆ. ಶೀಘ್ರದಲ್ಲೇ ಸಿನಿಮಾ ಸೆಟ್ಟೇರಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಸುದ್ದಿ ನಿಜನಾ? ಚಿತ್ರತಂಡ ಅಧಿಕೃತವಾಗಿ ಹೇಳುವವರೆಗೂ ಕಾಯಬೇಕಿದೆ. ಇದನ್ನೂ ಓದಿ:ಬಾಲಿವುಡ್ ಸಿನಿಮಾ ಬಗ್ಗೆ ಅಪ್‌ಡೇಟ್ ಹಂಚಿಕೊಂಡ ಸಮಂತಾ

‘ಜೈಲರ್’ ಸಕ್ಸಸ್ ನಂತರ ಶಿವಣ್ಣ ಮತ್ತಷ್ಟು ಬ್ಯುಸಿಯಾಗಿದ್ದಾರೆ. ಭೈರತಿ ರಣಗಲ್, ಕರಟಕ ಧಮನಕ, ಘೋಸ್ಟ್ 2, ರಾಮ್ ಚರಣ್ ಜೊತೆಗಿನ ಹೊಸ ಸಿನಿಮಾದಲ್ಲಿ ಶಿವಣ್ಣ ನಟಿಸುತ್ತಿದ್ದಾರೆ. ಈ ಪ್ರಾಜೆಕ್ಟ್‌ಗಳ ನಡುವೆ ಹೇಮಂತ್ ರಾವ್ ಜೊತೆ ಸಿನಿಮಾ ಮಾಡಬೇಕಿದೆ.

ಹೇಮಂತ್ ರಾವ್ ನಿರ್ದೇಶನದ ಸಿನಿಮಾಗಳು ಮೋಡಿ ಮಾಡ್ತಿವೆ. ಹೊಸ ಬಗೆಯ ಕಥೆಗಳನ್ನು ತೆರೆಗೆ ತರಲು ತೆರೆಮರೆಯಲ್ಲಿ ತಯಾರಿ ಮಾಡಿಕೊಳ್ತಿದ್ದಾರೆ.

Share This Article