ಹಾವೇರಿಯಲ್ಲಿ ಎಷ್ಟು ಸೀಟು ಗೆಲ್ಲಿಸ್ತಾನೋ ನೋಡೋಣ: ಸೇಡಿನ ರಾಜಕಾರಣಿ – ಸಿಎಂ ವಿರುದ್ಧ ನೆಹರೂ ಓಲೇಕಾರ್ ಕಿಡಿ

Public TV
1 Min Read

ಹಾವೇರಿ: ಬಿಜೆಪಿ (BJP) ಬುಧವಾರ ರಾತ್ರೋರಾತ್ರಿ ಬಿಡುಗಡೆ ಮಾಡಿದ 2ನೇ ಹಂತದ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್‌ ಕೈತಪ್ಪಿದ್ದಕ್ಕೆ ಹಾಲಿ ಶಾಸಕ ನೆಹರೂ ಓಲೇಕಾರ್ (Nehru Olekar) ಕೆಂಡಾಮಂಡಲರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ 2ನೇ ಪಟ್ಟಿಯಲ್ಲಿ ಹಾವೇರಿ ಮೀಸಲು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ನೆಹರೂ ಓಲೇಕಾರ್‌ಗೆ ಟಿಕೆಟ್ ಮಿಸ್ ಆಗಿದೆ. ಹಾವೇರಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನನಗೆ ಟಿಕೆಟ್ ಮಿಸ್ ಆಗಲು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಜಿಲ್ಲಾಧ್ಯಕ್ಷ ಸಿದ್ದರಾಜ ಕಲ್ಲಕೋಟಿ ಕಾರಣ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಬಿಜೆಪಿ 2 ನೇ ಪಟ್ಟಿ ರಿಲೀಸ್-‌ 23 ಅಭ್ಯರ್ಥಿಗಳ ಹೆಸರು ಬಿಡುಗಡೆ

ಅವನ ಕ್ಷೇತ್ರದ ಚುನಾವಣೆ ಹೇಗೆ ಮಾಡುತ್ತಾನೆ ಎಂಬುದನ್ನ ನೋಡುತ್ತೇನೆ. ಜಿಲ್ಲೆಯಲ್ಲಿ ಎಷ್ಟು ಸೀಟು ಬಿಜೆಪಿ ಗೆಲ್ಲಿಸುತ್ತಾನೆ. ಯಡಿಯೂರಪ್ಪ ಹೆಸರಿನಲ್ಲಿ ಸಿಎಂ ಆದವನು. ಯಡಿಯೂರಪ್ಪನವರಿಗೆ ಮೋಸ ಮಾಡಿದ್ದಾನೆ ಎಂದು ಕಿಡಿಕಾರಿದ್ದಾರೆ.

ರಾಷ್ಟ್ರೀಯ ನಾಯಕರಿಗೆ ಸ್ವಲ್ಪ ದಿನದಲ್ಲಿ ಗೊತ್ತಾಗುತ್ತೆ. ಉದ್ದೇಶಪೂರ್ವಕವಾಗಿ ಟಿಕೆಟ್‌ ತಪ್ಪಿಸಿದ್ದಾರೆ. ರಾಜಕಾರಣದಲ್ಲಿ ನನ್ನ ಬೆಳವಣಿಗೆ ಸಹಿಸಲಾರದೆ ತಪ್ಪಿಸಿದ್ದಾರೆ. ಮುಖ್ಯಮಂತ್ರಿ ಮಾಡಿದ ಹಗರಣವನ್ನ ಬಯಲಿಗೆ ಎಳೆಯುತ್ತೇನೆ.‌ ಆತ ಮಾಡಿದ ಘನಕಾರ್ಯವನ್ನ ಜನರ ಮುಂದೆ ಬಿಚ್ಚಿಡುತ್ತೇನೆ. ಸೂಕ್ತ ತನಿಖೆ‌ ಮಾಡಿಸುತ್ತೇನೆ. ಹಿಂದಿನ ಭಾರಿ ಸಹ ಟಿಕೆಟ್ ತಪ್ಪಿಸಲು ಓಡಾಡಿದ್ದರು. ಸೇಡಿನ ರಾಜಕಾರಣಿ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಟಿಕೆಟ್ ಕೈತಪ್ಪಿದೆ ಎಂಬ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಎ.ಟಿ.ರಾಮಸ್ವಾಮಿ ಮನವಿ

Share This Article