ವ್ಯಕ್ತಿಯ ಮೇಲೆ ಮೂತ್ರ ಮಾಡಿದ್ದು RSS ಕಾರ್ಯಕರ್ತವೆಂದ ಗಾಯಕಿ ವಿರುದ್ಧ FIR!

Public TV
2 Min Read

ಭೋಪಾಲ್: ದಲಿತನ ಮೇಲೆ ವ್ಯಕ್ತಿಯೊಬ್ಬರ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಸಂಬಂಧ ವಿವಾದಾತ್ಮಕ ಟ್ವೀಟ್ ಮಾಡಿರುವ ಭೋಜ್‍ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ (Bhojpuri Singer Neha Singh Rathore) ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

ಹೌದು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಾಯಕಿ ಟ್ವೀಟ್ (Tweet) ಒಂದನ್ನು ಮಾಡಿದ್ದಳು. ಅದರಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತರನ್ನು ಕೆಟ್ಟದಾಗಿ ತೋರಿಸಿದ್ದಳು. ಈ ಹಿನ್ನೆಲೆಯಲ್ಲಿ ಭೋಪಾಲ್‍ನ ಹಬೀಬ್‍ಗಂಜ್ ಪೊಲೀಸ್ ಠಾಣೆಯಲ್ಲಿ (Habibganj Police Station) ಶುಕ್ರವಾರ ನೇಹಾ ವಿರುದ್ಧ ಎಫ್‍ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜಿಸಿ ವಿಕೃತಿ- ದುಷ್ಕರ್ಮಿ ಅರೆಸ್ಟ್

ನೇಹಾ ಸಿಂಗ್ ಎಂಬ ಹೆಸರಿನ ಟ್ವಿಟ್ಟರ್ ಖಾತೆಯ ವಿರುದ್ಧ ಸೂರಜ್ ಎಂಬವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೂತ್ರ ವಿಸರ್ಜನೆ ಪ್ರಕರಣ ಸಂಬಂಧ ಆರ್‍ಎಸ್‍ಎಸ್ ಕಾರ್ಯಕರ್ತರನ್ನು ಕೆಟ್ಟದಾಗಿ ತೋರಿಸುವ ಮೀಮ್ಸ್ ಹಾಕಲಾಗಿದೆ ಎಂದು ಹಬೀಬ್‍ಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಮನೀಷ್ ಸಿಂಗ್ ಭಡೋರಿಯಾ ತಿಳಿಸಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲೂ ಬುಲ್ಡೋಜರ್‌ ಸದ್ದು; ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜನೆ ಮಾಡಿದ್ದ ಆರೋಪಿ ಮನೆ ಧ್ವಂಸ

ಸದ್ಯ ಐಪಿಸಿ ಸೆಕ್ಷನ್ 153 ರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದೇವೆ. ಹಾಗೆಯೇ ಟ್ವಿಟ್ಟರ್ ಕಂಪನಿಯಿಂದ ಖಾತೆದಾರರ ಬಗ್ಗೆ ಮಾಹಿತಿಯನ್ನು ಪಡೆಯುತ್ತೇವೆ. ಟ್ವೀಟ್ ಅನ್ನು ಖಾತೆದಾರರೇ ಅಥವಾ ಬೇರೆ ಯಾರಾದರೂ ಹಾಕಿದ್ದಾರೆಯೇ ಎಂಬುದನ್ನು ತನಿಖೆಯ ಬಳಿಕ ಸ್ಪಷ್ಟಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಆದಿವಾಸಿ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಪ್ರಕರಣ – ಸಂತ್ರಸ್ತನ ಕಾಲು ತೊಳೆದು ಗೌರವಿಸಿದ ಮಧ್ಯಪ್ರದೇಶ ಸಿಎಂ

ಟ್ವೀಟ್‍ನಲ್ಲೇನಿತ್ತು..?: ರಾಷ್ಟ್ರೀಯ ಸ್ವಯಂಸೇವಕ ಸಂಘದ ಡ್ರೆಸ್ (RSS Dress) ಧರಿಸಿದ್ದ ವ್ಯಕ್ತಿಯೊಬ್ಬ ತನ್ನ ಮುಂದೆ ಕುಳಿತಿದ್ದ ಮತ್ತೊಬ್ಬ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವಂತೆ ಚಿತ್ರೀಕರಿಸಲಾದ ಫೋಟೋವನ್ನು ಗಾಯಕಿ ಟ್ವೀಟ್ ಮಾಡಿದ್ದಳು. ಈ ಮೂಲಕ ಆಕೆ ವಿವಾದಕ್ಕೀಡಾಗಿದ್ದಳು. ಈಕೆಯ ಮೇಲೆ ಆರ್‍ಎಸ್‍ಎಸ್ ಮತ್ತು ಬುಡಕಟ್ಟು ಸಮುದಾಯದ ನಡುವೆ ವೈಷಮ್ಯವನ್ನು ಹುಟ್ಟುಹಾಕಿದ ಆರೋಪವಿದೆ.

ಏನಿದು ಘಟನೆ..?: ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋವೊಂದು ವೈರಲ್ ಆಗಿದ್ದು, ಭಾರೀ ವಿವಾದ ಸೃಷ್ಟಿಸಿತ್ತು. ಪ್ರವೇಶ್ ಶುಕ್ಲಾ ಎಂಬ ವ್ಯಕ್ತಿಯೊಬ್ಬ ಬುಡಕಟ್ಟು ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವುದು ವೀಡಿಯೋದಲ್ಲಿ ಕಂಡುಬಂದಿತ್ತು. ಈ ವೀಡಿಯೋ ವೈರಲ್ ಆದ ಬಳಿಕ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದರೆ ಇತ್ತ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ವಿಷಯದ ಬಗ್ಗೆ ಗಮನ ಹರಿಸಿದರು. ಸಂತ್ರಸ್ತನ ಕಾಲು ತೊಳೆದು ಕ್ಷಮೆಯಾಚಿಸಿದರು. ಇನ್ನು ಆರೋಪಿಗಳ ಮೇಲೆ ಎನ್‍ಎಸ್‍ಎ (ರಾಷ್ಟ್ರೀಯ ಭದ್ರತಾ ಕಾಯ್ದೆ) ವಿಧಿಸುವುದು ಸೇರಿದಂತೆ ಕಠಿಣ ಕ್ರಮಕ್ಕೆ ಆದೇಶಿಸಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್