ಲಾಡ್ಲೇ ಮಶಾಕ್ ದರ್ಗಾದ ಶಿವಲಿಂಗ ಪೂಜೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ – ಆಂದೋಲಾ ಶ್ರೀಗಿಲ್ಲ ಪೂಜೆ ಭಾಗ್ಯ

Public TV
1 Min Read

ಕಲಬುರಗಿ: ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ (Ladley Mashak Dargah) ಶಿವಲಿಂಗಕ್ಕೆ ಶಿವರಾತ್ರಿಯಂದು (Shivaratri) ಪೂಜೆ ಸಲ್ಲಿಸಲು ಹೈಕೋರ್ಟ್‌ ಅನುಮತಿ ನೀಡಿದೆ.

ಮಹಾಶಿವರಾತ್ರಿಯಂದು ಪೂಜೆ ಸಲ್ಲಿಕೆಗೆ ಅವಕಾಶ ಕೋರಿ ಹಿಂದೂಗಳು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ (Kalaburagi) ಪೀಠ ಪೂಜೆಗೆ ಅನುಮತಿ ನೀಡಿದೆ. ಫೆ.26ರಂದು ಮಧ್ಯಾಹ್ನ 2:00 ರಿಂದ 6:00ರ ವರೆಗೆ ಪೂಜೆಗೆ ಅವಕಾಶ ನೀಡಿದೆ. ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಹೊರತುಪಡಿಸಿ ಉಳಿದವರಿಗೆ ಪೂಜೆಗೆ ಅವಕಾಶ ನೀಡಿ ನ್ಯಾಯಾಲಯ ಆದೇಶಿಸಿದೆ. ಇದನ್ನೂ ಓದಿ: Haveri | ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ – ಪ್ರಯಾಣಿಕರು ಪಾರು

ಕಳೆದ ಬಾರಿ ನ್ಯಾಯಾಲಯ ಎರಡು ಸಮುದಾಯದ 15 ಜನರಿಗೆ ಪೂಜೆ ಮತ್ತು ಪ್ರಾರ್ಥನೆಗೆ ಅವಕಾಶ ನೀಡಿತ್ತು. ಬಳಿಕ ಕೋಮು ಗಲಭೆ ಮರುಕಳಿಸದಂತೆ ಕಲಬುರಗಿ ಜಿಲ್ಲಾ ಪೊಲೀಸರು ವ್ಯಾಪಕ ಬಂದೋಬಸ್ತ್ ಕೈಗೊಂಡಿದ್ದರು. ಎರಡು ಧರ್ಮದ ಜನ ನಿರ್ವಿಘ್ನವಾಗಿ ಲಾಡ್ಲೇ ಮಶಾಕ್ ದರ್ಗಾದಲ್ಲಿ ಪೂಜೆ ಸಲ್ಲಿಸಿದ್ದರು. ಇದನ್ನೂ ಓದಿ: ಚಾ.ನಗರ: SSLC, 2nd PUC ಪರೀಕ್ಷೆ – ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ

Share This Article