ಗಡೀಪಾರು ಭೀತಿಯಲ್ಲಿದ್ದ ಚೇತನ್‍ಗೆ ಹೈಕೋರ್ಟ್ ರಿಲೀಫ್

Public TV
1 Min Read

ಬೆಂಗಳೂರು: ಒಸಿಐ ಮಾನ್ಯತೆ ರದ್ದು ಹಿನ್ನೆಲೆಯಲ್ಲಿ ಗಡೀಪಾರು ಭೀತಿಯಲ್ಲಿದ್ದ ನಟ ಚೇತನ್‍ಗೆ (Chetan) ಹೈಕೋರ್ಟ್‍ನಿಂದ (High Court) ಷರತ್ತುಬದ್ಧ ರಿಲೀಫ್ ದೊರೆತಿದೆ.

ನ್ಯಾ. ಎಂ ನಾಗಪ್ರಸನ್ನರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ನಟ ಚೇತನ್‍ಗೆ 2018ರಲ್ಲಿ ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನೀಡಲಾಗಿತ್ತು. ಆದರೆ ಚೇತನ್ ಮೇಲೆ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ (Central Government) ನೋಟಿಸ್ ನೀಡಿ ಉತ್ತರ ಪಡೆದಿತ್ತು. ಚೇತನ್ ನೀಡಿದ್ದ ಉತ್ತರ ಸಮಾಧಾನಕರವಾಗಿಲ್ಲದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಸಿಐ ಕಾರ್ಡ್ ರದ್ದುಪಡಿಸಿತ್ತು.

karnataka highcourt

ಆದರೆ ಚೇತನ್ ಪರ ವಕೀಲರು, ಚೇತನ್ ವಾದ ಆಲಿಸದೇ ಕ್ರಮ ಕೈಗೊಂಡಿರುವುದು ಸರಿಯಲ್ಲವೆಂದು ವಾದಿಸಿದ್ದರು. ಈ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಚೇತನ್ ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ತಡೆ ನೀಡದಂತೆ ಕೇಂದ್ರ, ರಾಜ್ಯ ಸರ್ಕಾರದ ವಕೀಲರಾದ ಎಎಜಿ ಅರುಣ್ ಶ್ಯಾಮ್, ಎಎಸ್ ಜಿ ಶಾಂತಿಭೂಷಣ್ ವಾದಿಸಿದ್ದರು. ಇದನ್ನೂ ಓದಿ: 2 ಲಾರಿಗಳ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಎರಡು ಕಡೆಯ ವಕೀಲರ ವಾದವನ್ನು ಆಲಿಸಿದ ಹೈಕೋರ್ಟ್ ನಟ ಚೇತನ್‍ಗೆ ಷರತ್ತುಬದ್ಧ ರಿಲೀಫ್ ನೀಡಿದೆ. ನ್ಯಾಯಾಂಗದ ಬಗ್ಗೆ ನಟ ಚೇತನ್ ಟ್ವೀಟ್ ಮಾಡುವಂತಿಲ್ಲ. ವಿಚಾರಣೆಗೆ ಬಾಕಿಯಿರುವ ಕೇಸ್‍ಗಳ ಬಗ್ಗೆಯೂ ಟ್ವೀಟ್ ಮಾಡುವಂತಿಲ್ಲ ಎಂದ ಕೋರ್ಟ್ ಜೂ. 2ರವರೆಗೆ ನಟ ಚೇತನ್ ವಿರುದ್ಧ ಕ್ರಮ ಬೇಡ ಎಂದು ಆದೇಶ ನೀಡಿದೆ. ಇದನ್ನೂ ಓದಿ: ಇಂದು ಕೂಡಲಸಂಗಮಕ್ಕೆ ರಾಹುಲ್ ಗಾಂಧಿ – ಬಸವ ಜಯಂತಿಯಲ್ಲಿ ‘ಕೈ’ ನಾಯಕರು ಭಾಗಿ

Share This Article