ದಿದಿ ನಾಡಿನಲ್ಲಿ ಹಿಂಸಾಚಾರ; ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

Public TV
2 Min Read

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಗ್ರಾಮದಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ಸಿಬಿಐಗೆ (ಕೇಂದ್ರಿಯ ತನಿಖಾ ದಳ) ವಹಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ.

Mamata banerjee

ಹಿಂಸಾಚಾರ ಪ್ರಕರಣವನ್ನು ಸಿಬಿಐಗೆ ವಹಿಸದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರವು ಮನವಿ ಮಾಡಿತ್ತು. ತನಿಖೆ ತಡೆಸಲು ವಿಶೇಷ ತಂಡವನ್ನೂ ರಚಿಸಲಾಗಿತ್ತು. ಆದರೆ, ರಾಜ್ಯ ಸರ್ಕಾರದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯವು ತನಿಖೆಯನ್ನು ಸಿಬಿಐಗೆ ವಹಿಸಿದೆ. ವಿಶೇಷ ತನಿಖಾ ತಂಡವು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ್ ಹಾಗೂ ಆರ್.ಭಾರದ್ವಾಜ್ ಅವರಿದ್ದ ಪೀಠವು ಆದೇಶ ನೀಡಿದೆ. ಅಲ್ಲದೆ ಏಪ್ರಿಲ್ ೭ರ ಒಳಗೆ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದೆ. ಇದನ್ನೂ ಓದಿ: ಟಿಎಂಸಿ ನಾಯಕನನ್ನು ಅರೆಸ್ಟ್ ಮಾಡುವಂತೆ ಮಮತಾ ಬ್ಯಾನರ್ಜಿ ಆದೇಶ

west bengal

ನೆನ್ನೆಯಷ್ಟೇ ಹಿಂಸಾಚಾರ ನಡೆದ ಸ್ಥಳಕ್ಕೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಘೋಷಿಸಿ, ಉದ್ಯೋಗಾವಕಾಶ ಕಲ್ಪಿಸುವ ಭರವಸೆಯನ್ನೂ ನೀಡಿದ್ದರು. ಅಲ್ಲದೆ, ಇಂದು ಬೆಳಿಗ್ಗೆಯಿಂದಲೇ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ವಿಶೇಷ ಕಾರ್ಯಾಚರಣೆಯನ್ನೂ ಪ್ರಾರಂಭಿಸಲು ಆದೇಶಿಸಿದ್ದರು. ಈ ಬೆನ್ನಲ್ಲೇ ಹೈಕೋರ್ಟ್ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಆದೇಶ ನೀಡಿದೆ. ಇದನ್ನೂ ಓದಿ: ಆಟ ಇನ್ನೂ ಮುಗಿದಿಲ್ಲ: ರಾಷ್ಟ್ರಪತಿ ಚುನಾವಣೆ ಬಗ್ಗೆ ಬಿಜೆಪಿಗೆ ಮಮತಾ ಬ್ಯಾನರ್ಜಿ ಟಾಂಗ್‌

ಸದ್ಯ ಈ ಘಟನೆಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿರುವ ಪ್ರತಿ ಪಕ್ಷಗಳು, ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಲಾರಂಭಿಸಿವೆ. ಇದಕ್ಕೆ ತಿರುಗೇಟು ನೀಡಿರುವ ಮಮತಾ ಬ್ಯಾನರ್ಜಿ, ಆರೋಪಿಗಳು ಪತ್ತೆಯಾಗದೇ ಇದ್ದಲ್ಲಿ ಅವರನ್ನು ಬೇಟೆಯಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

west bengal fire accident

ಏನಿದು ಪ್ರಕರಣ?
ಇಲ್ಲಿನ ಬಗುಟಿ ಗ್ರಾಮ ಪಂಚಾಯ್ತಿ ಮುಖಂಡ ಭಾದು ಶೇಖ್ ಅವರ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ-೬೦ರ ಅಂಗಡಿಯೊಂದರಲ್ಲಿ ಇರುವಾಗ ಶೇಖ್ ಅವರ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು ೧೦ ರಿಂದ ೧೨ ಮನೆಗೆ ಬೆಂಕಿ ಹಚ್ಚಿದ್ದರು. ಇದರಿಂದಾಗಿ ೮ ಮಂದಿ ಸಜೀವ ದಹನವಾಗಿದ್ದರು. ಇದರಲ್ಲಿ ಇಬ್ಬರು ಮಕ್ಕಳೂ ಸಹ ಇದ್ದರು ಎಂಬುದಾಗಿ ಬೀರ್ಭುಮ್ ಎಸ್‌ಪಿ ನಾಗೇಂದ್ರ ತ್ರಿಪಾಟಿ ಮಾಹಿತಿ ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತವಾಗಿಯೇ ವಿಚಾರಣೆ ನಡೆಸಲು ಮುಂದಾಗಿತ್ತು. ಈ ನಡುವೆ ಜಿಲ್ಲೆಯ ಕೆಲ ಕುಟುಂಬಗಳು ಹಿಂಸಾಚಾರಕ್ಕೆ ಬೆಚ್ಚಿಬಿದ್ದಿದ್ದು, ತಮ್ಮ ಮನೆಗಳನ್ನು ತೊರೆದಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *