ಬೆಂಗಳೂರು: ದ್ವಿತೀಯ ಪಿಯುಸಿ (Second PUC) ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ- 1 ಮತ್ತು ಪರೀಕ್ಷೆ-2ರಲ್ಲಿ ಪಡೆದ ಅಂಕಗಳ ಪೈಕಿ ಯಾವುದು ಅತ್ಯಧಿಕವೋ ಆ ಅಂಕಗಳನ್ನೇ ಸಿಇಟಿ (CET) ಫಲಿತಾಂಶಕ್ಕೆ ಪರಿಗಣಿಸಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.
ಕೆಲ ಅಭ್ಯರ್ಥಿಗಳು ಪರೀಕ್ಷೆ-1ರಲ್ಲಿ ಪಡೆದ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಎರಡನೇ ಪರೀಕ್ಷೆ ಕೂಡ ತೆಗೆದುಕೊಳ್ಳುತ್ತಿದ್ದಾರೆ. ಅಂತಹವರಿಗೆ ಕಳೆದ ವರ್ಷದಂತೆ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನು ಸಿಇಟಿ ರ‍್ಯಾಂಕ್‌ಗೆ ಪರಿಗಣಿಸಲಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂಗಳು ಅಂತ ಹೇಳಬಾರದು, ಪಂಚಮಸಾಲಿಗಳು ಪ್ರಬಲರಾಗುತ್ತಿರುವುದ್ದಕ್ಕೆ ಟಾರ್ಗೆಟ್: ವಚನಾನಂದ ಸ್ವಾಮೀಜಿ
ದ್ವಿತೀಯ ಪಿಯುಸಿಯ ಎರಡೂ ಪರೀಕ್ಷೆಗಳ ಫಲಿತಾಂಶ ಬಂದ ನಂತರವೇ ಸಿಇಟಿ ಫಲಿತಾಂಶ ಪ್ರಕಟಿಸುವುದು. ಹೀಗಾಗಿ ಎರಡನೇ ಪರೀಕ್ಷೆಯ ಅಂಕಗಳನ್ನು ಪರಿಗಣಿಸುವುದಿಲ್ಲ ಎನ್ನುವುದು ಸುಳ್ಳು. ಇಂತಹ ವದಂತಿಗಳಿಗೆ ಕಿವಿ ಕೊಡಬೇಡಿ ಎಂದು ಹೇಳಿದರು. ಇದನ್ನೂ ಓದಿ: ಹಾರ್ದಿಕ್ ವಿಕೆಟ್ ಉರುಳಿದಾಗ ಕುಣಿದು ಕುಪ್ಪಳಿಸಿದ ಅಣ್ಣ ಕೃನಾಲ್ ಪಾಂಡ್ಯ – ಬ್ರದರ್ vs ಬ್ರದರ್ ವಿಡಿಯೋ ವೈರಲ್!
ಕರ್ನಾಟಕ ರಾಜ್ಯ ಪಠ್ಯ ಕ್ರಮದ ಪಿಯುಸಿ ಅಭ್ಯರ್ಥಿಗಳಿಗೆ ಮಾತ್ರ ಈ ಎರಡು ಪರೀಕ್ಷೆಗಳ ನಿಯಮ ಅನ್ವಯವಾಗುತ್ತದೆ. ಉಳಿದಂತೆ ಕೇಂದ್ರ ಹಾಗೂ ಇತರ ರಾಜ್ಯಗಳ ಬೋರ್ಡ್ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಹುಟ್ಟುಹಬ್ಬದಂದೇ ಯುಎಸ್‌ನ ಜಲಪಾತದಲ್ಲಿ ಮುಳುಗಿ ಭಾರತೀಯ ಮೂಲದ ಟೆಕ್ಕಿ ಸಾವು

