ಹಿಜಬ್‌ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ: ಅಮೆರಿಕ

Public TV
1 Min Read

ನ್ಯೂಯಾರ್ಕ್‌: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಹಿಜಬ್‌ ಧರಿಸುವುದನ್ನು ನಿಷೇಧಿಸಿರುವುದು ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆ ಎಂದು ಅಮೆರಿಕ ಅಭಿಪ್ರಾಯಪಟ್ಟಿದೆ.

ಕರ್ನಾಟಕವು ಧಾರ್ಮಿಕ ಉಡುಪುಗಳ ಅನುಮತಿಯನ್ನು ನಿರ್ಧರಿಸಬಾರದು. ಶಾಲಾ-ಕಾಲೇಜುಗಳಲ್ಲಿ ಹಿಜಬ್‌ ನಿಷೇಧವು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತದೆ. ಆ ಮೂಲಕ ಮಹಿಳೆಯರು ಮತ್ತು ಹೆಣ್ಣುಮಕ್ಕಳನ್ನು ಅವಮಾನಿಸುತ್ತಿದೆ ಎಂದು ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿ ರಷದ್‌ ಹುಸೇನ್‌ ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: ಜೈಪುರಕ್ಕೆ ಕಾಲಿಟ್ಟ ಹಿಜಬ್ ವಿವಾದ – ಬುರ್ಕಾ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ನೋ ಎಂಟ್ರಿ ಎಂದ ಕಾಲೇಜ್

ಆಸ್ಟ್ರೇಲಿಯಾದ ಮೆಲ್ಬರ್ನ್‌ನಲ್ಲಿ ನಡೆದ ʼಕ್ವಾಡ್‌ʼ ಸದಸ್ಯ ರಾಷ್ಟ್ರಗಳ ಸಭೆಯ ಬೆನ್ನಲ್ಲೇ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್‌ ಮತ್ತು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆ್ಯಂಟೊನಿ ಬ್ಲಿಂಕೆನ್‌ ಭಾಗವಹಿಸಿದ್ದರು.

ಕರ್ನಾಟಕದಲ್ಲಿ ತಲೆದೋರಿರುವ ಹಿಜಬ್‌ ವಿವಾದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಕುರಿತು ಕಳವಳ ವ್ಯಕ್ತಪಡಿಸಿರುವ ಪಾಕಿಸ್ತಾನ, ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ಸಮನ್ಸ್‌ ಜಾರಿ ಮಾಡಿತ್ತು. ಇದನ್ನೂ ಓದಿ: ಎಸ್‌ಪಿ ಸರ್ಕಾರ ಇದ್ದಾಗ ಕೇವಲ ಒಂದು ಜಾತಿಯ ಅಭಿವೃದ್ಧಿಗಾಗಿ ಕೆಲಸ ಮಾಡಿತು: ಅಮಿತ್‌ ಶಾ

Share This Article
Leave a Comment

Leave a Reply

Your email address will not be published. Required fields are marked *