ರಾಜ್ಯ ಸರ್ಕಾರ ಹಿಜಬ್, ಹಲಾಲ್, ವ್ಯಾಪಾರ ನಿಷೇಧದ ಭಜನೆ ಮಾಡುತ್ತಿದ್ದು, ಬಿಜೆಪಿಯವರು ಧರ್ಮದ್ರೋಹಿಗಳು: ದಿನೇಶ್ ಗುಂಡೂರಾವ್

Public TV
1 Min Read

ಬೆಂಗಳೂರು: ರಾಜ್ಯದ ಅಭಿವೃದ್ಧಿಯನ್ನು ಕಾಲ ಕಸ ಮಾಡಿಕೊಂಡಿರುವ ರಾಜ್ಯ ಸರ್ಕಾರ ಹಿಜಬ್, ಹಲಾಲ್, ವ್ಯಾಪಾರ ನಿಷೇಧದ ಭಜನೆ ಮಾಡುತ್ತಿದೆ. ಭಗವದ್ಗೀತೆಯ ತತ್ವಕ್ಕೆ ವಿರುದ್ಧವಾಗಿ ಮನುಷ್ಯ ದ್ವೇಷ ಪಸರಿಸುತ್ತಿರುವ ಬಿಜೆಪಿಯವರು ನಿಜವಾದ ಧರ್ಮದ್ರೋಹಿಗಳು ಎಂದು ಟ್ವಿಟ್ಟರ್‌ನಲ್ಲಿ ಸರಣಿ ಟ್ವೀಟ್ ಮೂಲಕ ಕೆಪಿಸಿಸಿ ಮಾಜಿ ಅಧ್ಯಕ್ಷ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ಸಾಧನೆಯ ಆಧಾರದಲ್ಲಿ ಜನರ ಮುಂದೆ ಹೋಗಲು ಈ ಸರ್ಕಾರಕ್ಕೆ ಮುಖವಿಲ್ಲ. ಹಾಗಾಗಿ ಮುಗ್ದ ಜನರಿಗೆ ಧರ್ಮದ ಕಣ್ಕಾಪು ಕಟ್ಟಿ ಮೂರ್ಖರನ್ನಾಗಿಸುತ್ತಿದೆ. ಧರ್ಮದ ಅಮಲು ತಲೆಗೇರಿಸಿಕೊಂಡಿರುವ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ? ಈ ಸರ್ಕಾರದಲ್ಲಿ 40% ಕಮೀಷನ್ ದಂಧೆ ನಿರಂತರವಾಗಿ ನಡೆಯುತ್ತಿದೆ. ಸಚಿವ ಈಶ್ವರಪ್ಪ ಕಮೀಷನ್ ಕೇಳಿದ ಬಗ್ಗೆ ಗುತ್ತಿಗೆದಾರರೊಬ್ಬರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಆದರೂ ಈಶ್ವರಪ್ಪ ವಿರುದ್ಧ ಯಾವುದೇ ಕ್ರಮವಿಲ್ಲ. ಸಂಪುಟದಲ್ಲಿ ಲಂಚಕೋರರ ಗುಂಪೇ ಇದೆ. ಕಮೀಷನ್ ದಂಧೆಯ ವಿಚಾರ ಮರೆಮಾಚಲು ಈ ಸರ್ಕಾರ ಧರ್ಮದ ಅಸ್ತ್ರ ಬಳಸಿ ನಾಟಕವಾಡುತ್ತಿದೆ. ಇದನ್ನೂ ಓದಿ: 40% ಕಮಿಷನ್ – ಈಶ್ವರಪ್ಪ ವಿರುದ್ಧ ಮೋದಿಗೆ ಪತ್ರ ಬರೆದ ಗುತ್ತಿಗೆದಾರ

ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಜಿಎಸ್‍ಟಿ ಪಾಲು ಸಿಕ್ಕಿಲ್ಲ. ಇತ್ತ ರಾಜ್ಯ 15 ಸಾವಿರ ಕೋಟಿ ರಾಜಸ್ವ ಕೊರತೆಯಲ್ಲಿದೆ. ಈ ಸರ್ಕಾರಕ್ಕೆ ಈ ವಿಚಾರಗಳು ಅಪ್ರಸ್ತುತವಾಗಿರುವುದು ದುರಂತ. ಕೇಂದ್ರದಿಂದ ಜಿಎಸ್‍ಟಿ ಪಾಲು ಕೇಳಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇಲ್ಲ. ಆದರೆ ಸದಾಕಾಲ ಧರ್ಮ ದೇವರು ಎಂದೇಳಿಕೊಂಡು ಕಲಹ ಸೃಷ್ಟಿಸಿ ರಾಜಕಾರಣ ಮಾಡುತ್ತಿದೆ. ಭಗವದ್ಗೀತೆ, ಬೈಬಲ್, ಕುರಾನ್ ಸೇರಿದಂತೆ ಎಲ್ಲಾ ಗ್ರಂಥಗಳ ಸಾರವೇ ಶಾಂತಿ ಮತ್ತು ಪ್ರೀತಿ. ಯಾವ ಧರ್ಮವೂ ಮನುಷ್ಯ ದ್ವೇಷದ ಬೋಧನೆ ಮಾಡಿಲ್ಲ. ಗ್ರಂಥಗಳ ಸಾರ ಗೊತ್ತಿಲ್ಲದ ಬಿಜೆಪಿಯವರು ಜನರ ಮನಸ್ಸಿನಲ್ಲಿ ಧರ್ಮದ ವಿಷಬೀಜ ಬಿತ್ತುತ್ತಿದ್ದಾರೆ. ಇದನ್ನೂ ಓದಿ: ಮಂತ್ರಾಲಯ ಮಠಕ್ಕೆ ಜಾಗ ಕೊಟ್ಟಿದ್ದು ಸಾಬ್ರು, ಬೇಡ ಅಂದ್ರೆ ಕಿತ್ಕೊಂಡು ಬನ್ನಿ: ಸಿಎಂ ಇಬ್ರಾಹಿಂ

Share This Article
Leave a Comment

Leave a Reply

Your email address will not be published. Required fields are marked *