ಹಿಜಬ್ ಹಾಕಿಸೋಕೆ ಅಥವಾ ತೆಗಿಸೋಕೆ ಯಾರೇ ಬಂದ್ರು ಒದ್ದು ಒಳಗೆ ಹಾಕಿ: ಪ್ರಹ್ಲಾದ್ ಜೋಶಿ

Public TV
1 Min Read

ಹುಬ್ಬಳ್ಳಿ: ಹಿಜಬ್ ಹಾಕಿಸೋಕೆ ಅಥವಾ ತೆಗಿಸೋಕೆ ಯಾರೇ ಬಂದರೂ ಒದ್ದು ಒಳಗೆ ಹಾಕಿ ಸರ್ಕಾರ ಎಷ್ಟು ದಿನ ಇವರನ್ನು ಸಂಬಾಳಿಸಬೇಕು. ಗಲಾಟೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕ್ಕೆ ಮುಂದಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹಿಜಬ್ ಗಲಾಟೆ ವಿಚಾರವಾಗಿ ಮಾತನಾಡಿದ ಅವರು, ಪ್ರಕರಣ ಈಗಾಗಲೇ ಕೋರ್ಟ್‍ನಲ್ಲಿದೆ. ಕೋರ್ಟ್‍ನಲ್ಲಿರುವಾಗಲೇ ದುರದ್ದೇಶದಿಂದ ಗಲಾಟೆ ಮಾಡಲಾಗುತ್ತಿದೆ. ಮಧ್ಯಂತರದ ಆದೇಶ ಎಲ್ಲಿ ಪಾಲನೆ ಆಗುತ್ತಿಲ್ಲವೋ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ, ನ್ಯಾಯಾಲಯ ಹಿಜಬ್ ಪರ ಅಥವಾ ವಿರುದ್ಧವಾದರೂ ಕೊಡಲಿ, ಅದನ್ನು ನಾವು ಪಾಲನೆ ಮಾಡಬೇಕಾಗುತ್ತದೆ. ಆದರೆ ಪರವಾಗಿ ಬಂದರೂ, ವಿರುದ್ಧವಾಗಿ ಬಂದರೂ ಹಿಜಬ್ ಹಾಕುತ್ತೇವೆ ಎನ್ನುವುದು ಸರಿಯಲ್ಲ. ಶಾಲೆ ಮತ್ತು ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಮಾತ್ರ ಬರಲು ಅವಕಾಶ ನೀಡಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸೈನ್ ಭಾಷೆ ಅರ್ಥಮಾಡಿಕೊಳ್ಳುವ ಎಐ ಮಾದರಿಯನ್ನು ರಚಿಸಿದ 20 ವರ್ಷದ ಯುವತಿ

ಸದನದಲ್ಲಿ ಕಾಂಗ್ರೆಸ್ ನಿರಂತರ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು, ಪ್ರತಿಭಟನೆ ಮಾಡುವುದೇ ಅವರ ಕಾಯಕವಾಗಿದೆ. ಅವರಿಗೆ ದೇವರು ಆದಷ್ಟು ಬೇಗ ಸದ್ಭುದ್ದಿ ನೀಡಲಿ, ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ವಿಪಕ್ಷಗಳು ಸರ್ಕಾರಕ್ಕೆ ಸಲಹೆ ನೀಡಬೇಕಿದೆ. ಅದನ್ನು ಬಿಟ್ಟು ಈ ರೀತಿ ಪ್ರತಿಭಟನೆಗೆ ಮುಂದಾಗಿದ್ದು ಸರಿಯಲ್ಲ ಎಂದಿದ್ದಾರೆ. ಇದನ್ನೂ ಓದಿ:  ಹಿಜಬ್ ತೆಗೆದು ರೀಲ್ಸ್ ಮಾಡ್ತಾರೆ, ಈಗ ಹಿಜಾಬ್ ತೆಗೆಯೋಕಾಗಲ್ವಾ – ಬೆಳಗಾವಿ ವಿದ್ಯಾರ್ಥಿನಿಯರ ಪ್ರಶ್ನೆ

Share This Article
Leave a Comment

Leave a Reply

Your email address will not be published. Required fields are marked *