ಹಿಮಾಚಲದಲ್ಲಿ ಭಾರೀ ಮಳೆ – ಕೊಚ್ಚಿ ಹೋಯ್ತು ಕಾರು, ಕುಸಿದು ಬಿದ್ದವು ಅಂಗಡಿಗಳು

Public TV
1 Min Read

ಶಿಮ್ಲಾ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ (Himachal Pradesh) ಬಿಯಾಸ್ ನದಿ ತುಂಬಿ ಹರಿಯುತ್ತಿದ್ದು ಪ್ರವಾಹ ಉಂಟಾಗಿದೆ.

ಬಿಯಾಸ್ ನದಿಯ (Beas River) ನೀರಿನ ಮಟ್ಟ ಹೆಚ್ಚಳದಿಂದಾಗಿ ಮಂಡಿ ಜಿಲ್ಲೆಯ ಸೇತುವೆಯ ಮೇಲೆ ನೀರು ಹರಿಯುತ್ತಿದೆ. ಕುಲು ಬಳಿ ಬಿಯಸ್‌ ನದಿಯ ಪ್ರವಾಹಕ್ಕೆ ಕಾರೊಂದು ಕೊಚ್ಚಿಕೊಂಡು ಹೋಗಿದೆ.ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ನದಿ ಬಳಿ ನಿರ್ಮಿಸಿದ ಅಂಗಡಿಗಳು ಕುಸಿದು ಬಿದ್ದಿವೆ. ರಾಷ್ಟ್ರೀಯ ಹೆದ್ದಾರಿ ಕೊಚ್ಚಿಹೋಗಿದೆ.  ಇದನ್ನೂ ಓದಿ: ಗುಡ್‌ನ್ಯೂಸ್‌ – 24 ಗಂಟೆಗಳಲ್ಲಿ KRSನಲ್ಲಿ 2.50 ಅಡಿ ನೀರು ಭರ್ತಿ

ರೈಲ್ವೇ ಹಳಿಗಳ ಮೇಲೆ ಗುಡ್ಡ ಜರಿದ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ. ಬಿಯಾಸ್ ನದಿಯ ನೀರಿನ ಮಟ್ಟವು ವೇಗವಾಗಿ ಏರಿದ ನಂತರ ನದಿಯ ಸಮೀಪ ಮನೆಯಲ್ಲಿ ಸಿಲುಕಿಕೊಂಡಿದ್ದ 6 ಜನರನ್ನು ಎಸ್‌ಡಿಆರ್‌ಎಫ್‌ ರಕ್ಷಿಸಿದೆ.


ಕುಲು, ಮನಾಲಿಯಲ್ಲಿ (Kullu Manali) ಬಹಳಷ್ಟು ಸಮಸ್ಯೆ ಆಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ವೀಡಿಯೋಗಳನ್ನು ಶೇರ್‌ ಮಾಡುತ್ತಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್