ಸಾರ್ವಜನಿಕರ ಎದುರೇ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಬರ್ಬರ ಹತ್ಯೆ

Public TV
1 Min Read

ಮಂಗಳೂರು: ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಸಂಪ್ಯ ಪೊಲೀಸ್ ಠಾಣೆ ಎದುರಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನನ್ನು ದುಷ್ಕರ್ಮಿಗಳು ಬರ್ಬರ ಹತ್ಯೆಗೈದಿದ್ದಾರೆ.

ಹಿಂಜಾವೇ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ(30) ಕೊಲೆಯಾದ ದುರ್ದೈವಿ. ಸಂಪ್ಯ ಪೊಲೀಸ್ ಠಾಣೆ ಮುಂಭಾಗ ಗಣೇಶೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ ಸಾರ್ವಜನಿಕರ ಎದುರಲ್ಲೇ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಯುವಕ ಖಾಸಗಿ ಫೈನಾನ್ಸ್ ಸಂಸ್ಥೆಯಿಂದ ಹಣವನ್ನು ಪಡೆದಿದ್ದನು. ಈ ವಿಚಾರಕ್ಕೆ ಕೆಲ ಯುವಕರು ಕಾರ್ತಿಕ್ ಜೊತೆ ಜಗಳಕ್ಕಿಳಿದಿದ್ದರು. ಮಾತಿಗೆ ಮಾತು ಬೆಳೆದು ಜಗಳ ತಾರಕ್ಕಕ್ಕೇರಿ ಕೋಪಗೊಂಡ ಯುವಕರ ಗುಂಪು ಕಾರ್ತಿಕ್‍ಗೆ ಚೂರಿಯಿಂದ ಇರಿದು ಕೊಲೆ ಮಾಡಿದೆ.

ಈ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದು, ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *