ಧಾರವಾಡ: ಬೆಳಗಾವಿಯಿಂದ ಗೋಮಾಂಸ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ತಡೆದ ಹಿಂದೂಪರ ಸಂಘಟನೆಯ ಮೇಲೆ ಹಲ್ಲೆ ಮಾಡಿರುವ ಘಟನೆ ಧಾರವಾಡದ ನರೇಂದ್ರ ಬೈಪಾಸ್ ಟೊಲ್‍ಗೇಟ್ ಬಳಿ ನಡೆದಿದೆ.
ಜಿಲ್ಲೆಯಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು, ಲಾರಿಗಳನ್ನು ತಡೆದಿದ್ದಾರೆ. ಈ ವೇಳೆ ಲಾರಿಯಲ್ಲಿದ್ದವರಿಗೆ ಹಾಗೂ ಕಾರ್ಯಕರ್ತರ ನಡುವೆ ಪರಸ್ಪರ ವಾಗ್ವಾದ ನಡೆದು ಜಗಳವಾಗಿದೆ. ಜಗಳ ತಾರಕ್ಕೇರಿದ್ದು, ಪರಿಣಾಮ ಹಿಂದೂಪರ ಸಂಘಟನೆ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಗೋಮಾಂಸ ರಫ್ತು ಮಾಡುತ್ತಿದ್ದ ವಾಹನವನ್ನು ಹಾಗೂ ಲಾರಿ ಜತೆಯಲ್ಲಿದ್ದ ಇನ್ನೊಂದು ಕಾರಿನಲ್ಲಿದ್ದವರನ್ನು ಕಾರ್ಯಕರ್ತರು ಪೊಲೀಸರ ವಶಕ್ಕೆ ನೀಡಿದ್ದಾರೆ.
ಗೋಮಾಂಸವನ್ನ ಅಕ್ರಮವಾಗಿ ರಫ್ತು ಮಾಡಲಾಗುತ್ತಿದೆ. ಮಾರಕಾಸ್ತ್ರಗಳಿಂದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಗಳ ಮೇಲೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಐವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದು, ಹಲ್ಲೆಗೆ ಒಳಗಾದವರನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ತನಿಖೆ ಕೈಗೊಂಡಿರುವ ಗ್ರಾಮೀಣ ಪೊಲೀಸರು, ಪರಿಸ್ಥಿತಿಯನ್ನ ಸರಿಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv