ಹಾಸನ: ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿಯವರಿಗೆ (Hindu leader Puneeth Kerehalli) ಸಕಲೇಶಪುರ (Sakleshpura) ಪ್ರವೇಶಕ್ಕೆ ನಿರ್ಬಂಧ ಹೇರಿ ಹಾಸನ ಡಿಸಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.
ಹಿಂದೂ ಹಿತರಕ್ಷಣಾ ಸಮಿತಿ ಆಯೋಜಿಸಿದ್ದ ಅಖಂಡ ಭಾರತ ಸಂಕಲ್ಪ ಯಾತ್ರೆಯಲ್ಲಿ (Bharat Sankalpa Yatra) ಪುನೀತ್ ಕೆರೆಹಳ್ಳಿ ದಿಕ್ಸೂಚಿ ಭಾಷಣ ಮಾಡುವವರಿದ್ದು. ಆದರೆ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಕಲೇಶಪುರ ಪ್ರವೇಶಕ್ಕೆ ನಿರ್ಬಂಧ ಹೇರುವಂತೆ ಜಿಲ್ಲಾಧಿಕಾರಿಗಳಿಗೆ ಎಸ್‍ಪಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ನಾಳೆ ದರ್ಶನ್ ಪಾಲಿಗೆ ಬಿಗ್ ಡೇ – ಸುಪ್ರೀಂ ತೀರ್ಪಿನತ್ತ ಚಿತ್ತ, ಮತ್ತೆ ಜೈಲುಪಾಲಾಗ್ತಾರಾ ನಟ?
ರಾಜ್ಯದ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಕೇಸ್ ಉಲ್ಲೇಖಿಸಿ ಡಿಸಿಗೆ ಮನವಿ ಮಾಡಲಾಗಿತ್ತು. ಮನವಿ ಪತ್ರದಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ಜನರ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆ ಇದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಉಲ್ಲೇಖಿಸಲಾಗಿತ್ತು.
ಎಸ್ಪಿ ಮನವಿಯಂತೆ 13-8-2025 ರಿಂದ 14 -8-2025 ರ ಬೆಳಿಗ್ಗೆ 6:00 ಗಂಟೆವರೆಗೆ ಸಕಲೇಶಪುರಕ್ಕೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: DRDO ವಿಜ್ಞಾನಿಗಳ ಮಾಹಿತಿ ಪಾಕ್‌ಗೆ ಹಂಚಿಕೆ – ಅತಿಥಿ ಗೃಹದ ಸಿಬ್ಬಂದಿ ಅರೆಸ್ಟ್