ಬಾಂಗ್ಲಾದಲ್ಲಿ ಮತ್ತೆ ಹಿಂದೂಗಳ ಮೇಲೆ ದಾಳಿ – ಕೆರೆಗೆ ಹಾರಿ ಪಾರಾದ ಉದ್ಯಮಿ

1 Min Read

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಹಿಂದೂಗಳ (Hindu) ಮೇಲಿನ ದಾಳಿಗಳ ಸರಣಿ ಮುಂದುವರಿದಿದೆ. ಉದ್ಯಮಿ ಕೊಂಕನ್ ಚಂದ್ರ (40) ಎಂಬವರು ಪವಾಡ ಸದೃಶವಾಗಿ ಜೀವ ಉಳಿಸಿಕೊಂಡಿದ್ದಾರೆ.

ಕೇಔರ್‌ಬಂಗಾ ಪ್ರದೇಶದಲ್ಲಿ ಫಾರ್ಮಸಿ ಮುಚ್ಚಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಮನೆ ಕಡೆ ಬರುತ್ತಿದ್ದ ಕೊಂಕನ್ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಹಲವು ಬಾರಿ ಹೊಟ್ಟೆಗೆ ಇರಿದು, ಪೆಟ್ರೋಲ್‌ಹಾಕಿ ಬೆಂಕಿ ಹಚ್ಚಿದ್ದಾರೆ.

ದೃಷ್ಟವಶಾತ್ ಪಕ್ಕದಲ್ಲೇ ಇದ್ದ ನೀರಿದ್ದ ಹಳ್ಳವೊಂದಕ್ಕೆ ಜಿಗಿದ ಕೊಂಕನ್ ಪ್ರಾಣ ಉಳಿಸಿಕೊಂಡಿದ್ದಾರೆ. ನಂತರ ಕೆಲ ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೊಂಕನ್ ಪರಿಸ್ಥಿತಿ ತುಂಬಾ ಗಂಭೀರವಾಗಿದ್ದು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ:  ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಗೆ ಗುಂಡಿಕ್ಕಿ ಕೊಲೆ; ತಿಂಗಳಲ್ಲಿ ನಡೆದ ಮೂರನೇ ಹತ್ಯೆ

ಈ ಕೃತ್ಯವನ್ನು ಯಾರು ಮಾಡಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ನಮಗೆ ನ್ಯಾಯ ಬೇಕು. ನನ್ನ ಪತಿ ಸರಳ ವ್ಯಕ್ತಿಯಾಗಿದ್ದು ಅವರು ಯಾರಿಗೂ ಹಾನಿ ಮಾಡಿಲ್ಲ. ಅವರು ಯಾರಿಗೂ ನೋವುಂಟು ಮಾಡಿಲ್ಲ ಎಂದು ಕೊಂಕನ್‌ ಅವರ ಪತ್ನಿ ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ಎರಡು ವಾರಗಳಲ್ಲಿ ಹಿಂದೂಗಳ ಮೇಲೆ ನಡೆದ ನಡೆದ ನಾಲ್ಕನೇ ದಾಳಿ ಇದಾಗಿದೆ.

Share This Article