ಹಿಂದೂಗಳಿಗೆ ದೊಡ್ಡ ಗೆಲುವು – ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ

Public TV
2 Min Read

ಲಕ್ನೋ: ಕಾಶಿ (Kashi) ಜ್ಞಾನವ್ಯಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಗಳು ನಡೆಸಿದ್ದ ಕಾನೂನು ಹೋರಾಟಕ್ಕೆ ಮಹತ್ವದ ಜಯ ಸಿಕ್ಕಿದೆ.

ಪುರಾತತ್ವ ಇಲಾಖೆ ನಡೆಸಿದ ವೈಜ್ಞಾನಿಕ ಸಮೀಕ್ಷೆಯಲ್ಲಿ ಮಸೀದಿ (Varanasi Gyanvapi Mosque) ನಿರ್ಮಾಣ ಆಗಿರುವುದು ಮಂದಿರದ ಮೇಲೆ ಎಂಬ ಸತ್ಯ ಬಯಲಾದ ಬೆನ್ನಲ್ಲೇ ಹಿಂದೂಗಳಿಗೆ ಈಗ ಪೂಜಾಧಿಕಾರ ದಕ್ಕಿದೆ. ಈ ಪ್ರಾರ್ಥನಾ ಮಂದಿರದಲ್ಲಿ ಸೀಲ್ ಮಾಡಿರುವ ಬೇಸ್‌ಮೆಂಟ್‌ನಲ್ಲಿ ಇರುವ ಹಿಂದೂ ವಿಗ್ರಹಗಳಿಗೆ ಪೂಜೆ ಮಾಡಲು ವಾರಣಾಸಿ ಕೋರ್ಟ್ (Varanasi Court) ಅನುಮತಿ ನೀಡಿದೆ.  ಇದನ್ನೂ ಓದಿ: ಮೈಸೂರಿಗೂ ಕಾಲಿಟ್ಟ ಧ್ವಜ ದಂಗಲ್- ಪ್ರತಾಪ್ ಸಿಂಹ ವಿರೋಧದ ಬೆನ್ನಲ್ಲೇ ಟಿಪ್ಪು ಬಾವುಟ ತೆರವು

 

ಮುಂದಿನ ಒಂದು ವಾರದಲ್ಲಿ ಪೂಜೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು. ಕಾಶಿ ವಿಶ್ವನಾಥ ಮಂದಿರಕ್ಕೆ ಸೇರಿದ ಅರ್ಚಕರನ್ನು ಗುರುವಾರ ನೇಮಿಸಬೇಕು. ಹಿಂದೂ ಅರ್ಚಕರು ಪೂಜೆ ಮಾಡಲು ಬ್ಯಾರಿಕೇಡ್ ತೆರವು ಮಾಡಬೇಕು ಎಂದು ಸ್ಥಳೀಯ ಆಡಳಿತಕ್ಕೆ ವಾರಣಾಸಿ ಕೋರ್ಟ್ ನಿರ್ದೇಶನ ನೀಡಿದೆ.

ಈ ಐತಿಹಾಸಿಕ ತೀರ್ಪು ನೀಡಿದ ವಾರಾಣಸಿ ನ್ಯಾಯಾಲಯದ ನ್ಯಾಯಮೂರ್ತಿ ಎ.ಕೆ. ವಿಶ್ವೇಶ ಅವರು ಇವತ್ತೇ ನಿವೃತ್ತರಾಗಿದ್ದಾರೆ. ಇದನ್ನೂ ಓದಿ: ಭಾರೀ ಬಿಗಿ ಭದ್ರತೆಯಲ್ಲಿ ನಕ್ಸಲ್ ನಾಯಕ ಬಿ.ಜಿ ಕೃಷ್ಣಮೂರ್ತಿ ಕೋರ್ಟ್‍ಗೆ ಹಾಜರು

ವಾರಣಾಸಿ ಕೋರ್ಟ್ ತೀರ್ಪು ಹಿಂದೂಗಳಲ್ಲಿ ಸಂತಸ ತಂದಿದೆ. ಈ ತೀರ್ಪನ್ನು, 1983ರಲ್ಲಿ ಅಯೋಧ್ಯೆ ರಾಮಮಂದಿರದ ಬೀಗ ತೆರೆಯಲು ಜಸ್ಟೀಸ್ ಕೃಷ್ಣಮೋಹನ್ ಪಾಂಡೆ ನೀಡಿದ್ದ ಆದೇಶಕ್ಕೆ ಹೋಲಿಕೆ ಮಾಡಲಾಗುತ್ತಿದೆ. ಮುಂದೊಂದು ದಿನ ಈ ಮಸೀದಿ ಕೂಡ, ಅಯೋಧ್ಯೆ ರಾಮಮಂದಿರದ ರೀತಿಯಲ್ಲಿ ಹಿಂದೂಗಳಿಗೆ ದಕ್ಕಬಹುದು ಎಂದು ವ್ಯಾಖ್ಯಾನಿಸಲಾಗುತ್ತಿದೆ.

 

ಇದು ಹಿಂದೂಗಳಿಗೆ ದಕ್ಕಿದ ದೊಡ್ಡ ಗೆಲುವು.ಒಂದು ವಾರದಲ್ಲಿ ಪೂಜೆ ಆರಂಭಿಸುತ್ತೇವೆ ಎಂದು ಕಾಶಿವಿಶ್ವನಾಥ ಮಂದಿರ ಟ್ರಸ್ಟ್ ತಿಳಿಸಿದೆ. ಆದರೆ ಈ ಆದೇಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಮೇಲ್ಮನವಿ ಹೋಗಲು ಮಸೀದಿ ಆಡಳಿತ ಮಂಡಳಿ ನಿರ್ಧರಿಸಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಹಿಂದೂಗಳ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಪ್ರತಿಕ್ರಿಯಿಸಿ, ಜ್ಞಾನವಾಪಿ ಪ್ರಕರಣದಲ್ಲಿ ಹಿಂದೂಗಳಿಗೆ ಸಿಕ್ಕಿದ ಮೊದಲ ದೊಡ್ಡ ಗೆಲುವು ಎಂದು ಬಣ್ಣಿಸಿದ ಅವರು ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ 31 ವರ್ಷದ ಬಳಿಕ ಪೂಜೆ ಮಾಡಲು ಅವಕಾಶ ಸಿಕ್ಕಿದೆ ಎಂದು ತಿಳಿಸಿದರು.

Share This Article