ಹಾಸನ: ಹಿರಿಯೂರು (Hiriyur) ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ (Accident) ಹಾಸನದ (Hassan) ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.
ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಕಣ್ಮರೆಯಾಗಿದ್ದಾರೆ. ಇಬ್ಬರು ಹಾಸನ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಒಟ್ಟಿಗೆ ಇಂಜಿನಿಯರಿಂಗ್ ಮುಗಿಸಿದ್ದರು. ಬಳಿಕ ಬೆಂಗಳೂರಿನಲ್ಲಿ ಎಂಟೆಕ್ ಮುಗಿಸಿ, ಸಾಫ್ಟ್‌ವೇರ್ ಇಂಜಿನಿಯರ್ (Techie) ಆಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: Chitradurga Bus Accident| PNRF ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ: ಮೋದಿ ಸಂತಾಪ
ಬೆಂಗಳೂರಿನಿಂದ ಬುಧವಾರ ರಾತ್ರಿ ಸ್ನೇಹಿತೆ ಮಿಲನ ಜೊತೆ ಬಸ್ ಹತ್ತಿ ಹೊರಟಿದ್ದರು. ಮಿಲನ ಗಾಯಗೊಂಡಿದ್ದು, ಚಿಕಿತ್ಸೆ ಪಡಿಯುತ್ತಿದ್ದಾರೆ. ಉಳಿದ ಇಬ್ಬರು ಕಣ್ಮರೆಯಾಗಿದ್ದಾರೆ. ಚಿತ್ರದುರ್ಗದ ಹಿರಿಯೂರಿನತ್ತ ಯುವತಿಯರ ಪೋಷಕರು ಹೊರಟಿದ್ದಾರೆ. ಇದನ್ನೂ ಓದಿ: ಬಸ್ಸಿನ ಡೀಸೆಲ್ ಟ್ಯಾಂಕ್‌ಗೆ ಟ್ರಕ್ ಗುದ್ದಿದ್ದರಿಂದ ದುರಂತ – ಸೀಬರ್ಡ್ ಮಾಲೀಕ

