ಸಂಸದ ಬ್ರಿಜೇಂದ್ರ ಸಿಂಗ್‌ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆ

Public TV
1 Min Read

ನವದೆಹಲಿ: ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ (Brijendra Singh) ಭಾನುವಾರ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ (Congress) ಸೇರ್ಪಡೆಯಾಗಿದ್ದಾರೆ. ಸಿಂಗ್‌, ಹಿಸಾರ್‌ ಕ್ಷೇತ್ರದ ಸಂಸದರಾಗಿದ್ದಾರೆ.

ಬಲವಾದ ರಾಜಕೀಯ ಕಾರಣಗಳಿಂದ ನಾನು ಬಿಜೆಪಿಯ (BJP) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಪಕ್ಷಕ್ಕೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಅಮಿತ್ ಶಾ (Amit Shah) ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಎಕ್ಸ್‌ ಖಾತೆಯಲ್ಲಿ ಬ್ರಿಜೇಂದ್ರ ಸಿಂಗ್‌ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮೋದಿ ಗ್ಯಾರಂಟಿಗೆ ವಾರಂಟಿ ಇಲ್ಲ: ಟಿಎಂಸಿ ನಾಯಕ ಟೀಕೆ

ಬಿಜೇಂದ್ರ ಸಿಂಗ್ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಮತ್ತು ದೀಪಕ್ ಬಬಾರಿಯಾ ಉಪಸ್ಥಿತರಿದ್ದರು.

ಅಕ್ಟೋಬರ್ 2 ರಂದು ಜಿಂದ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಹರಿಯಾಣದಲ್ಲಿ ಬಿಜೆಪಿ-ಜೆಜೆಪಿ ಮೈತ್ರಿ ಬಗ್ಗೆ ಪ್ರಸ್ತಾಪಿಸಲಾಯಿತು. ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾನು ಬಿಜೆಪಿ ತೊರೆಯಲು ಅದು ಕೂಡ ಒಂದು ಕಾರಣ ಎಂದು ಸಿಂಗ್‌ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ತೃಣಮೂಲ ಕಾಂಗ್ರೆಸ್‌ನ 42 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮಾಜಿ ಕ್ರಿಕೆಟಿಗ ಯುಸೂಫ್‌ ಪಠಾಣ್‌ ಕಣಕ್ಕೆ

Share This Article