ಭಾರೀ ಮಳೆ; ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಗುರುವಾರ ರಜೆ

Public TV
1 Min Read

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ (Dakshina Kannada Rain) ಹಿನ್ನೆಲೆಯಲ್ಲಿ ಗುರುವಾರವೂ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ (School-College Holiday) ರಜೆ ಘೋಷಿಸಲಾಗಿದೆ.

ಮಳೆ ಕಾರಣಕ್ಕೆ ಸತತ ಮೂರು ದಿನಗಳಿಂದ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹವಾಮಾನ ಇಲಾಖೆ ಮಳೆ ಮುಂದುವರಿಯುವ ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: Mysuru Bengaluru Expressway ಪ್ರಯಾಣಕ್ಕೆ ಸ್ಪೀಡ್ ಲಿಮಿಟ್ – 100 ಕಿಮೀ ವೇಗ ದಾಟಿದ್ರೆ ಫೈನ್!

ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.6 ರಂದು ರಜೆ ಘೋಷಿಸಲಾಗಿದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತಿ ವಹಿಸಬೇಕು ಎಂದು ಎಚ್ಚರಿಕೆ ಸಹ ನೀಡಲಾಗಿದೆ. ಇದನ್ನೂ ಓದಿ: ವಾಹನ ಸವಾರರಿಗೆ ಮತ್ತೆ ಗುಡ್‌ ನ್ಯೂಸ್ – ಟ್ರಾಫಿಕ್ ಫೈನ್ ಡಿಸ್ಕೌಂಟ್ ಅವಧಿ ವಿಸ್ತರಿಸಿದ ಸರ್ಕಾರ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್