ಉಡುಪಿ, ಮಂಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ

Public TV
1 Min Read

ಉಡುಪಿ/ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ (ಜು.24) ಉಡುಪಿ (Udupi) ಹಾಗೂ ಮಂಗಳೂರು (Mangaluru) ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಇದನ್ನೂ ಓದಿ:5 ವರ್ಷದ ಬಳಿಕ ಚೀನೀಯರಿಗೆ ಭಾರತ ಪ್ರವಾಸಕ್ಕೆ ಅನುಮತಿ

ಈ ಕುರಿತು ಮಂಗಳೂರು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ನಾಳೆ ಮಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆ ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿದ್ದಾರೆ.

ಇನ್ನೂ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆ ಉಡುಪಿ ಡಿಸಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಇನ್ನೂ ಪದವಿ ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕೊಪ್ಪಳ | ಕನ್ನಡ ಭಾಷಾಂತರ ಮಾಡೋಕೆ ಸಿಬ್ಬಂದಿ ಕರೆದ ಬ್ಯಾಂಕ್ ಮ್ಯಾನೇಜರ್ – ವಿಡಿಯೋ ವೈರಲ್

Share This Article