ಯಶ್‌ಗೆ ಹಾಲಿವುಡ್‌ನ ಆಸ್ಕರ್ ವಿಜೇತ ಪ್ರೊಡ್ಯೂಸರ್ ಬಲ!

Public TV
1 Min Read

ರಾಮಾಯಣ (Ramayana) ಚಿತ್ರವನ್ನು ಯಶ್ (Yash) ನಟಿಸಿ, ನಿರ್ಮಿಸುತ್ತಿದ್ದಾರೆ. ಭಾರತದ ಧಾರ್ಮಿಕ ನಂಬಿಕೆಯ ಈ ಚಿತ್ರವನ್ನು ಯಶ್ ಜಾಗತಿಕ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಭರವಸೆಯನ್ನು ಈ ಹಿಂದೆಯೇ ಕೊಟ್ಟಿದ್ದರು. ಅದರಂತೆ ಯಶ್ ಈಗ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ.

ರಾಮಾಯಣ ಚಿತ್ರವನ್ನ ಜಾಗತಿಕ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಕಾರಣ ಈ ಚಿತ್ರಕ್ಕೆ ಓರ್ವ ನಿರ್ಮಾಪಕರಾಗಿ ಹಾಲಿವುಡ್‌ನ ಆಸ್ಕರ್ ಪ್ರಶಸ್ತಿ ಪುರಸ್ಕೃತ ನಿರ್ಮಾಪಕ ಚಾರ್ಲಿ ರೋವನ್ ಸೇರ್ಪಡೆಯಾಗಿದ್ದಾರೆ. ಆದರೆ ಈ ಕುರಿತು ಸದ್ಯ ಚಿತ್ರತಂಡ ಅಧಿಕೃತ ಮಾಹಿತಿಯನ್ನು ಹಂಚಿಕೊಳ್ಳಬೇಕಿದೆ.ಇದನ್ನೂ ಓದಿ: ನೀನು ಚಪ್ಪಲಿ ಹೊಲಿಯಲು ಯೋಗ್ಯನಲ್ಲ – ನಿಂದಿಸಿದ್ದ ಮೂವರು ಇಂಡಿಗೋ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್‌

ರಾಮಾಯಣ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ಚಿತ್ರವನ್ನ ಯಶ್ ನಟಿಸಿ, ನಿರ್ಮಿಸುತ್ತಿದ್ದಾರೆ. ರಾವಣನ ಪಾತ್ರದಲ್ಲಿ ಯಶ್ ಕಾಣಿಸಿಕೊಳ್ಳಲಿದ್ದು, ರಾಮನಾಗಿ ರಣಬೀರ್ ಕಪೂರ್ ಹಾಗೂ ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ಎರಡು ಸರಣಿಯಲ್ಲಿ ಚಿತ್ರ ತೆರೆಕಾಣಲಿದ್ದು, ಮೊದಲ ಭಾಗ 2026ರ ದೀಪಾವಳಿ ಹಬ್ಬಕ್ಕೆ ರಿಲೀಸ್ ಆಗಲಿದೆ.

ಬಿಗ್ ಬಜೆಟ್‌ನಲ್ಲಿ ತಯಾರಾಗ್ತಿರುವ ರಾಮಾಯಣ ಚಿತ್ರವನ್ನ ಯಶ್ ತಮ್ಮ ನಿರ್ಮಾಣ ಸಂಸ್ಥೆ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಮೂಲಕ ನಿರ್ಮಿಸುತ್ತಿದ್ದಾರೆ. ಇನ್ನೋರ್ವ ನಿರ್ಮಾಪಕರಾಗಿ ಪ್ರೈಮ್‌ ಫೋಕಸ್ ಸ್ಟುಡಿಯೋ ನಮಿತ್ ಮಲ್ಹೋತ್ರಾ ಕೂಡ ಚಿತ್ರದ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಇದೀಗ ವಿಶ್ವ ಮಟ್ಟದಲ್ಲಿ ರಾಮಾಯಣ ಚಿತ್ರವನ್ನ ತಲುಪಿಸುವ ಸಲುವಾಗಿ ಯಶ್ ಜೊತೆ ಹಾಲಿವುಡ್‌ನ ಖ್ಯಾತ ನಿರ್ಮಾಪಕ ಚಾರ್ಲಿ ರೋವನ್ (Charles Roven) ಕೈಜೋಡಿಸಿದ್ದು, ರಾಮಾಯಣಕ್ಕೆ ಇನ್ನಷ್ಟು ಬಲ ಬಂದಂತಾಗಿದೆ. ಈಗಾಗ್ಲೇ ಯಶ್ ಕೂಡ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.ಇದನ್ನೂ ಓದಿ: 7 ವರ್ಷದ ಬಾಲಕಿ ಮೇಲೆ ಅಪ್ರಾಪ್ತರಿಂದಲೇ ಅತ್ಯಾಚಾರ – ಇಬ್ಬರು ಬಾಲಕರು ಅರೆಸ್ಟ್‌

Share This Article