Chitradurga | ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಹೋಂ ಗಾರ್ಡ್ ನೇಣಿಗೆ ಶರಣು

Public TV
1 Min Read

ಚಿತ್ರದುರ್ಗ: ಮದುವೆಯಾಗಲು ಹೆಣ್ಣು ಸಿಗಲಿಲ್ಲವೆಂದು ಮನನೊಂದ ಗೃಹ ರಕ್ಷಕ ದಳದ ಸಿಬ್ಬಂದಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಮೊಳಕಾಲ್ಮೂರು (Molakalmuru) ತಾಲೂಕಿನ ಜೆಬಿ ಹಳ್ಳಿಯಲ್ಲಿ ನಡೆದಿದೆ.

ತಿರುಮಲ (31) ಮೃತ ಹೋಂ ಗಾರ್ಡ್. ತಿರುಮಲ ರಾಂಪುರ ಪೊಲೀಸ್ ಠಾಣೆಯಲ್ಲಿ ಹೋಂ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ಸೆಸ್ಕ್ ವತಿಯಿಂದ 1.06 ಕೋಟಿ ರೂ. ಪರಿಹಾರ ವಿತರಣೆ

ತಿರುಮಲ ಹಲವು ವರ್ಷಗಳಿಂದ ಮದುವೆ ಮಾಡಿಕೊಳ್ಳಲು ಹೆಣ್ಣು ಹುಡುಕುತ್ತಿದ್ದು, ವಯಸ್ಸಾಗ್ತಿದೆ ಮದುವೆ ಮಾಡಿಕೊಳ್ಳಬೇಕು ಎನ್ನುವ ಚಿಂತೆಗೆ ಬಿದ್ದಿದ್ದರು. ಅಲ್ಲದೇ ಇತ್ತೀಚಿಗೆ ಮೂರು ಕಡೆ ಹೆಣ್ಣು ನೋಡಲು ತೆರಳಿದ್ದು, ಹೆಣ್ಣಿನ ಕಡೆಯವರಿಂದ ತಿರಸ್ಕಾರಗೊಂಡ ಪರಿಣಾಮ ಹೆಚ್ಚು ಘಾಸಿಯಾಗಿತ್ತು. ಇದನ್ನೂ ಓದಿ: ಗ್ರೇಟರ್ ಬೆಂಗಳೂರು | 5 ನಗರ ಪಾಲಿಕೆ ರಚಿಸಿ ರಾಜ್ಯ ಸರ್ಕಾರ ಆದೇಶ

ಮದುವೆ ಬಗ್ಗೆಯೇ ತೀವ್ರ ಯೋಚಿಸುತ್ತಿದ್ದ ತಿರುಮಲ ಮನನೊಂದು, ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಮೃತನ ತಂದೆ ಸೋಮರೆಡ್ಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪುಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ – ಕೆಲಸದ ಒತ್ತಡವೇ ಕಾರಣ ಅಂತ ಡೆತ್ ನೋಟ್ ಬರೆದಿಟ್ಟು ಸೂಸೈಡ್

Share This Article