ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ – PSI ನೇಮಕಾತಿಗೆ ತಡೆ: ಆರಗ ಜ್ಞಾನೇಂದ್ರ

Public TV
1 Min Read

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಪಿ.ಎಸ್.ಐ. ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂದ ಅಲ್ಲಿನ ಜನಪ್ರತಿನಿಧಗಳ ಒತ್ತಾಯದ ಮೇರೆಗೆ ಪ್ರಸ್ತುತ ನೇಮಕಾತಿಗೆ ತಡೆ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಶನಿವಾರ ಕಲಬುರಗಿಯ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಅತಿಥಿಗೃಹದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು ಅವರು, ಈ ಕುರಿತು ಅಧ್ಯಯನಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ 371ಜೆ ವಿಶೇಷ ಸ್ಥಾನಮಾನದ ಕಾಯ್ದೆ ಮತ್ತು ಆದೇಶಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಲು ಸಮಿತಿಗೆ ನಿರ್ದೇಶನ ನೀಡಲಾಗಿದೆ. ಸದರಿ ಸಮಿತಿಯಲ್ಲಿ ಗೃಹ ಸಚಿವಾಲಯದ ಕಾರ್ಯದರ್ಶಿಗಳು, ಡಿ.ಪಿ.ಎ.ಆರ್. ಕಾರ್ಯದರ್ಶಿ ಹಾಗೂ ಡಿ.ಜಿ.ಪಿ ಅವರು ಸಹ ಇರಲಿದ್ದಾರೆ ಎಂದರು. ಇದನ್ನೂ ಓದಿ: ಶಾಲೆಯ ಸಂಧಾನ ಯಶಸ್ವಿ – ಹಿಜಬ್ ತೆಗೆಸಲು ಒಪ್ಪಿದ ಪೋಷಕರು

ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸ್ವಚ್ಛತೆ ಮತ್ತು ಶೌಚಾಲಯ ನಿರ್ವಹಣೆಗೆ ಗುತ್ತಿಗೆ ಅಧಾರದ ಮೇಲೆ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.

ಹಿಜಬ್ ಪ್ರಕರಣ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಕುರಿತು ರಾಜ್ಯದ ಉಚ್ಛ ನ್ಯಾಯಾಲಯವು ನೀಡಿರುವ ಮಧ್ಯಂತರ ಆದೇಶವನ್ನು ಪಾಲನೆ ಮಾಡಲಾಗುತ್ತಿದೆ. ಮಕ್ಕಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಯಾರು ಮಾಡಬಾರದು. ಕೋರ್ಟ್ ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಈ ಪ್ರಕರಣದಲ್ಲಿ ಬೆರಳೆಣಿಕೆ ಕಡೆ ಅನಗತ್ಯ ಗೊಂದಲ ಮೂಡಿಸಲಾಗುತ್ತಿದೆ. ಕೆಲವು ದುಷ್ಟಶಕ್ತಿಗಳು, ಸಂಘನೆಗಳು ಈ ವಿಷಯದಲ್ಲಿ ಕಾರ್ಯನಿರ್ವಹಿಸುತ್ತಿರುವುದನ್ನು ಸರ್ಕಾರವು ಸೂಕ್ಷ್ಮವಾಗಿ ಗಮನಿಸಿದೆ. ಇಂತವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಶಿವಮೊಗ್ಗ, ಉಡುಪಿಯಲ್ಲಿ ಇದೇ ವಿಷಯದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಿಜಬ್‍ಗೆ ಅವಕಾಶ ನೀಡಿ – ಪ್ರತಿಭಟಿಸುತ್ತಿದ್ದ 58 ವಿದ್ಯಾರ್ಥಿಗಳು ಸಸ್ಪೆಂಡ್!

Share This Article
Leave a Comment

Leave a Reply

Your email address will not be published. Required fields are marked *