ಶಾಸಕ ಹರೀಶ್ ಗೌಡಗೆ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‍ಮೇಲ್ – ಆರೋಪಿಗಳು ಅರೆಸ್ಟ್

By
1 Min Read

ಬೆಂಗಳೂರು: ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ ಹರೀಶ್ ಗೌಡ (MLA K Harish Gowda) ಅವರನ್ನು ಹನಿಟ್ರ್ಯಾಪ್ ಮಾಡಿ ಬ್ಲಾಕ್‍ಮೇಲ್ ಮಾಡಿದ್ದ ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು ಎಂದು ಗುರುತಿಸಲಾಗಿದೆ. ಗ್ಯಾಂಗ್‍ನಲ್ಲಿ ಓರ್ವ ಯುವತಿ ಸಹ ಭಾಗಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಪ್ರಭಾವಿಗಳನ್ನು ಸಂಪರ್ಕಿಸಿ ಅವರನ್ನು ಹಿಂಬಾಲಿಸುತ್ತಿದ್ದರು. ಬಳಿಕ ಅವರ ಮೊಬೈಲ್ ನಂಬರ್ ಪಡೆದು, ಅವರು ಉಳಿದುಕೊಂಡಿದ್ದ ಹೋಟೆಲ್‍ನಲ್ಲಿ ಉಳಿದುಕೊಳ್ಳುತ್ತಿದ್ದರು. ಬಳಿಕ ವಿಐಪಿಗಳು ಖಾಲಿ ಮಾಡಿದ ರೂಮ್ ಬಾಡಿಗೆ ಪಡೆದು ಯುವತಿಯನ್ನು ಬಳಸಿಕೊಂಡು ಅದೇ ರೂಮ್‍ನಲ್ಲಿ ಹಿಡನ್ ಕ್ಯಾಮರ್ ಬಳಸಿ ವೀಡಿಯೋ ಚಿತ್ರಿಕರಿಸಿ ಪ್ರಭಾವಿಗಳಿಗೆ ತಮ್ಮದೇ ವೀಡಿಯೋ ಎಂದು ಹಣಕ್ಕಾಗಿ ಪೀಡಿಸುತ್ತಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಇದನ್ನೂ ಓದಿ: ಜೂನ್ 30ಕ್ಕೆ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ ಸಿಎಂ

ಶಾಸಕ ಹರೀಶ್ ಗೌಡ ಅವರಿಗೂ ಆರೋಪಿಗಳು ಇದೇ ರೀತಿ ಬ್ಲಾಕ್‍ಮೇಲ್ ಮಾಡಿದ್ದರು. ಹರೀಶ್ ಗೌಡ ದೂರಿನ ಅನ್ವಯ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ವಿಶ್ವವಿದ್ಯಾಲಯ ಒಂದರ ಉಪಕುಲಪತಿಗಳಿಗೂ ಆರೋಪಿಗಳು ಬ್ಲಾಕ್‍ಮೇಲ್ ಮಾಡಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮಾದಕ ವ್ಯಸನ ಆಧುನಿಕ ಪಿಡುಗು, ಬೆಂಗಳೂರನ್ನು ಉಡ್ತಾ ಪಂಜಾಬ್ ಆಗಲು ಬಿಡಲ್ಲ: ಪರಮೇಶ್ವರ್

Share This Article