ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಭರವಸೆ

Public TV
1 Min Read

ಯಾದಗಿರಿ: ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಾಗಿ ಪಬ್ಲಿಕ್ ಟಿವಿಯಲ್ಲಿ ವರದಿ ಬಂದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಸ್ಥಳಕ್ಕೆ ದೌಡಾಯಿಸಿ, ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ.

 ಬೇಸಿಗೆ ಕಳೆದು ಮಳೆಗಾಲ ಆರಂಭ ಆಗಿದ್ದರೂ, ಕೇಂದ್ರ ವಡಗೇರಾದಲ್ಲಿ ಎರಡ್ಮೂರು ವರ್ಷಗಳಿಂದ ಕುಡಿಯುವ ನೀರಿನ ತೀವ್ರ ಅಭಾವ ಸೃಷ್ಟಿಯಾಗಿದೆ. ಕುಡಿಯುವ ನೀರಿಗಾಗಿ ವಡಗೇರಾ ಪಟ್ಟಣದ ಜನ ಎರಡು ಕಿಲೋ ಮೀಟರ್ ದೂರ ಕ್ರಮಿಸಿ ನೀರು ತರುವ ದುಸ್ಥಿತಿ ಎದುರಾಗಿದೆ. ಇದನ್ನೂ ಓದಿ: ಯಾದಗಿರಿಯಲ್ಲಿ ಕುಡಿಯೋ ನೀರಿಗೂ ಹಾಹಾಕಾರ- ಕಿ.ಮೀಟರ್‌ಗಟ್ಟಲೇ ಹೋಗಿ ನೀರು ತರೋ ಪರಿಸ್ಥಿತಿ

ಶಾಲೆಗೆ ಹೋಗಬೇಕಿದ್ದ ವಿದ್ಯಾರ್ಥಿಗಳು ಶಾಲೆ ಬಿಟ್ಟು ಪೋಷಕರ ಜೊತೆ ನೀರು ತರೋದಕ್ಕೆ ನಿತ್ಯವೂ ಹೋಗಲೇಬೇಕು. ಇಲ್ಲದಿದ್ದರೆ ಕುಡಿಯೋದಕ್ಕೆ ನೀರು ಸಿಗದೇ ಪರದಾಡಬೇಕಾಗ್ತದೆ. ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದರ ಕುರಿತಾದ ಸುದ್ದಿ ಪ್ರಸಾರದ ಬೆನ್ನಲ್ಲೇ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.

ಸ್ಥಳಕ್ಕೆ ದೌಡಾಯಿಸಿ ಇರೋ ಸಮಸ್ಯೆಯ ವಾಸ್ತವಾಂಶ ಅರಿತುಕೊಂಡಿದ್ದಾರೆ. ಶೀಘ್ರದಲ್ಲೇ ಇಡೀ ಪಟ್ಟಣಕ್ಕೆ ನೀರು ಒದಗಿಸೋದಾಗಿ ಭರವಸೆ ನೀಡಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್