ಆಸ್ಪತ್ರೆಗೆ ದಾಖಲಾದ ಬಿಗ್ ಬಿ: ಆಂಜಿಯೋಪ್ಲ್ಯಾಸ್ಟಿಗೆ ಒಳಗಾದ ನಟ ಅಮಿತಾಭ್ ಬಚ್ಚನ್

Public TV
1 Min Read

ಬಾಲಿವುಡ್ ನ ಖ್ಯಾತ ನಟ, ಬಿಗ್ ಬಿ ಅಮಿತಾಭ್ ಬಚ್ಚನ್ ಇಂದು ಬೆಳ್ಳಂಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಅವರು ದಾಖಲಾಗಿದ್ದು, ಅವರಿಗೆ ಆಂಜಿಯೋಪ್ಲ್ಯಾಸ್ಟಿ (Angioplasty) ಚಿಕಿತ್ಸೆ ನೀಡಲಾಗಿದೆ. ಅಮಿತಾಭ್ ಅವರಿಗೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡ ಬೆನ್ನಲ್ಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ.

81ರ ವಯಸ್ಸಿನ ಅಮಿತಾಭ್ ದಣಿವರಿಯದ ಜೀವ. ಮೊನ್ನೆಯಷ್ಟೇ ಅವರು ಕಲ್ಕಿ ಸಿನಿಮಾದ ಶೂಟಿಂಗ್ ಮುಗಿಸಿಕೊಂಡು ಮುಂಬೈಗೆ (Mumbai) ಆಗಮಿಸಿದ್ದರು. ಸಂಪೂರ್ಣ ಶೂಟಿಂಗ್ ಮುಗಿಸಿಕೊಂಡು ಬಂದಿರುವುದಾಗಿ ತಿಳಿಸಿದ್ದಾರೆ. ಸತತವಾಗಿ ಕಲ್ಕಿ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದ ಅವರು, ದಿಢೀರ್ ಅಂತ ಆಸ್ಪತ್ರೆಗೆ ದಾಖಲಾಗಿದ್ದರು.

ದಿಗ್ಗಜರೇ ಒಂದಾಗಿ ನಟಿಸುತ್ತಿರುವ ಕಲ್ಕಿ ಸಿನಿಮಾದ ಬಗ್ಗೆ ಬಿಗ್ ಬಿ, ಎರಡು ದಿನದ ಹಿಂದೆಯಷ್ಟೇ ಬಿಗ್ ಅಪ್ ಡೇಟ್ ನೀಡಿದ್ದರು. ಸಿನಿಮಾ ಶೂಟಿಂಗ್ (Shooting) ಕುರಿತಂತೆ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರ. ಮೊನ್ನೆ ರಾತ್ರಿ ಶೂಟಿಂಗ್ ಮುಗಿಸಿ ಬಂದೆ. ಚಿತ್ರದ ಚಿತ್ರೀಕರಣ ಮುಗಿದಿದೆ. ಅಂದುಕೊಂಡಂತೆ ಮೇ 9ಕ್ಕೆ ಚಿತ್ರ ರಿಲೀಸ್ ಆಗಲಿದೆ ಎಂದು ಅವರು ಮಾಹಿತಿಯನ್ನು ಹಂಚಿಕೊಂಡಿದ್ದರು.

ಸಿನಿಮಾ ಟೀಮ್ ಕೂಡ ಅಮಿತಾಭ್ ಬಚ್ಚನ್  (Amitabh Bachchan) ಅವರ ಹುಟ್ಟು ಹಬ್ಬದ (Birthday) ದಿನದಂದು ಕಲ್ಕಿ ಟೀಮ್ ಸಿನಿಮಾದ ಅಮಿತಾಭ್ ಬಚ್ಚನ್ ಪಾತ್ರದ ಫಸ್ಟ್ ಲುಕ್(First Look)  ರಿಲೀಸ್ ಮಾಡಿತ್ತು. ವಿಚಿತ್ರ ವೇಷದಲ್ಲಿ ಅಮಿತಾಭ್ ಕಾಣಿಸಿಕೊಂಡಿದ್ದು ಪಾತ್ರದ ಬಗ್ಗೆ ಕುತೂಹಲ ಮೂಡಿಸಿದೆ.

Share This Article