ನಿರಂತರ ಮಳೆಗೆ ಕುಸಿದ ಮನೆ – ಒಂದೂವರೆ ವರ್ಷದ ಮಗು ಸಾವು, ಆರು ಜನರಿಗೆ ಗಾಯ

Public TV
1 Min Read

ಕೊಪ್ಪಳ: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಮನೆ ಕುಸಿದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಗಂಗಾವತಿ (Gangavathi) ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.

ಪ್ರಶಾಂತಿ ಮೃತ ಮಗು. ಗಾಯಾಳುಗಳನ್ನು ಹನುಮಂತಿ (28), ದುರಗಮ್ಮ(65), ಭೀಮಮ್ಮ (19), ಹುಸೇನಪ್ಪ(46), ಫಕೀರಪ್ಪ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಟೆಕ್ಕಿ ಜೊತೆ ಆ.28ಕ್ಕೆ ಅನುಶ್ರೀ ಮದುವೆ!

ಬುಧವಾರ ಜಿಲ್ಲೆಯಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಮನೆ ಕುಸಿದ ಪರಿಣಾಮ ಮನೆಯಲ್ಲಿದ್ದ ಮಗು ಸಾವನ್ನಪ್ಪಿದ್ದು, ಇನ್ನುಳಿದ ಆರು ಜನರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಗಂಗಾವತಿ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ಯು.ನಾಗರಾಜ್ ಹಾಗೂ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಕೋಲ್ಕತ್ತಾ | ಬಾಯ್ಸ್‌ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್‌ ಕೇಸ್ – ಬಾಗಲಕೋಟೆ ಯುವಕ ಅರೆಸ್ಟ್‌

Share This Article