ಅತಿಕ್ರಮಣದಾರರಿಗೆ ಮನೆ, ಸಬ್ಸಿಡಿ ನೆರವು ವಿಪರ್ಯಾಸ: ಜೋಶಿ ಕಿಡಿ

2 Min Read

– ರಾಜ್ಯ ಸರ್ಕಾರದಿಂದ ಶರವೇಗದ ತುಷ್ಟೀಕರಣ

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಸರ್ಕಾರ ಬೆಂಗಳೂರಿನ ಕೋಗಿಲು (Kogilu Layout) ಅತಿಕ್ರಮಣದಾರರಿಗೆ ಕೇವಲ ಎರಡೇ ದಿನದಲ್ಲಿ ಪರಿಹಾರ ವ್ಯವಸ್ಥೆಗೆ ಮುಂದಾಗಿರುವುದು ತುಷ್ಟೀಕರಣದ ಶರವೇಗವನ್ನು ತೋರ್ಪಡಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.

ರಾಜ್ಯದಲ್ಲಿ ರೈತರು, ಬೆಳೆಹಾನಿ ಸಂತ್ರಸ್ತರು ಮತ್ತು ಇತರೆ ನಿರಾಶ್ರಿತರು ಪರ್ಯಾಯ ವ್ಯವಸ್ಥೆ ಹಾಗೂ ಪರಿಹಾರಕ್ಕಾಗಿ ವರ್ಷಾನುಗಟ್ಟಲೆ ಕಾಯುತ್ತಿದ್ದಾರೆ. ಗೃಹಲಕ್ಷ್ಮಿ ಫಲಾನುಭವಿಗಳೂ ಗ್ಯಾರಂಟಿ ನಿಧಿಗಾಗಿ ಕಾಯುತ್ತಿದ್ದಾರೆ. ಆದರೆ, ಸರ್ಕಾರ ಕೋಗಿಲು ಅತಿಕ್ರಮಣದಾರರಿಗೆ ಮಾತ್ರ ಕ್ಷಣಾರ್ಧದಲ್ಲಿ ಪರಿಹಾರ, ಪರ್ಯಾಯ ವ್ಯವಸ್ಥೆಗೆ ಮುಂದಾಗಿದೆ. ಇದು ಕಾಂಗ್ರೆಸ್ ಸರ್ಕಾರದ ಮಿತಿಮೀರಿದ ಧರ್ಮ ಓಲೈಕೆ ಆಡಳಿತವನ್ನು ಪ್ರದರ್ಶಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಣ ಕೊಟ್ಟಿದ್ದು ಅವ್ನು, ತೆಗೆದುಕೊಂಡಿದ್ದು ನಾನು – ಶರಣು ಸಲಗರ್ ಆಡಿಯೋ ವೈರಲ್, ದುಡ್ಡು ಪಡೆದು ಉಲ್ಟಾ ಹೊಡೆದ್ರಾ?

ಅತಿಕ್ರಮಣದಾರರಿಗೆ ಮನೆ ಮತ್ತು ಸಬ್ಸಿಡಿ ವಿಪರ್ಯಾಸ:
ಈ ಅತಿಕ್ರಮಣದಾರರಿಗೆ ಮನೆ ಕಟ್ಟಿಕೊಳ್ಳಲು ನೆರವು ನೀಡುವುದಾಗಿ ಸಹ ಘೋಷಿಸಿದ್ದು, ಪ್ರತಿ ಮನೆಗೆ 8 ರಿಂದ 11 ಲಕ್ಷ ರೂ. ಮತ್ತು ಸಬ್ಸಿಡಿ ನೀಡುವುದಾಗಿ ಹೇಳಿದ್ದು, ಇದೊಂದು ಬಾರಿ ಪರಿಹಾರ ಕಲ್ಪಿಸಲಾಗುತ್ತದೆ ಎಂದಿರುವುದು ವಿಪರ್ಯಾಸ. ಸರ್ಕಾರದ್ದು ಅದ್ಯಾವ ರೀತಿಯ ಪರಿಹಾರ ಕ್ರಮ ಎಂದು ಜೋಶಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಿಗ್‌ ಬಾಸ್‌ ಮನೆಯಲ್ಲಿ ಕಿತ್ತಾಡಿಕೊಂಡ ರಕ್ಷಿತಾ-ಸ್ಪಂದನಾ; ಮಾಳು ಹೊರಹೋಗೋದಕ್ಕೆ ಕಾರಣ ಯಾರು?

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೇವಲ ಒಂದು ಧರ್ಮದ ಓಲೈಕೆಯಲ್ಲೇ ಮುಳುಗಿದೆ. ತುಷ್ಟೀಕರಣಕ್ಕಾಗಿ ಶರವೇಗದಲ್ಲಿ ಪರಿಹಾರ ಕ್ರಮ ಕೈಗೊಂಡಿದೆ. ಅಲ್ಲದೇ, ಔಪಚಾರಿಕ ಪರಿಹಾರ ನೀಡಲು ಮುಂದಾಗಿದ್ದು, ಅತಿ ಬೇಸರದ ಸಂಗತಿ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವೈಕುಂಠ ಏಕಾದಶಿ – ಮಾಲೂರಿನ ಚಿಕ್ಕ ತಿರುಪತಿ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ

ಬರ, ಪ್ರವಾಹದಂತಹ ಪ್ರಾಕೃತಿಕ ವಿಪತ್ತುಗಳ ಸಂದರ್ಭದಲ್ಲಿ ಪರಿಹಾರ ಪಡೆಯಲು ರಾಜ್ಯದ ಸಂತ್ರಸ್ತರು ವರ್ಷಗಳಿಂದ ಕಾಯುತ್ತಿದ್ದರು. ಆದರೆ, ರಾಜ್ಯ ಸರ್ಕಾರ ಕೋಗಿಲು ಅತಿಕ್ರಮಣದಾರರಿಗೆ ಕೇವಲ ಎರಡೇ ಎರಡು ದಿನಗಳಲ್ಲಿ ಪರಿಹಾರ ಒದಗಿಸಿ ತನ್ನ ಧರ್ಮಾಧಾರಿತ ಆಡಳಿತವನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಿವರ್ಸ್‌ ತೆಗೆಯುವಾಗ ಬಸ್‌ ಡಿಕ್ಕಿ; 4 ಮಂದಿ ಸಾವು – 9 ಜನರಿಗೆ ಗಾಯ

ಪಕ್ಕದ ರಾಜ್ಯದ ಕಾಂಗ್ರೆಸ್ ನಾಯಕರೊಬ್ಬರು ಕರೆ ಮಾಡಿ, ತಕ್ಷಣ ಪರಿಹಾರ ಕ್ರಮಕ್ಕೆ ನಿರ್ದೇಶಿಸಿದ್ದು, ರಾಜ್ಯ ಸರ್ಕಾರ ಕಾಂಗ್ರೆಸ್ ಪಕ್ಷದ ನಾಯಕತ್ವದ ಕೈಗೊಂಬೆಯಾಗಿ ವರ್ತಿಸುತ್ತಿದೆ. ತನ್ನ ಆದ್ಯ ಕರ್ತವ್ಯ ಮತ್ತು ಕಾನೂನಿನ ಪರಿಮಿತಿಯ ಜವಾಬ್ದಾರಿಯನ್ನು ಗಾಳಿಗೆ ತೂರಿ, ತುಷ್ಟೀಕರಣ ರಾಜಕಾರಣದ ಪರಮಾವಧಿಯನ್ನು ಪ್ರದರ್ಶಿಸಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡ| ಒಂದೇ ವರ್ಷದಲ್ಲಿ 704 ಕಡೆ ಆನೆ ದಾಳಿಯಿಂದ ಬೆಳೆ ಹಾನಿ; 23 ಲಕ್ಷ ಹಣ ಪರಿಹಾರ ಬಾಕಿ

ಈ ಸರ್ಕಾರದ ಆಡಳಿತದಲ್ಲಿ ರೈತರು, ನಿಜವಾದ ಸಂತ್ರಸ್ತರು, ಗೃಹಲಕ್ಷ್ಮಿ ಫಲಾನುಭವಿಗಳು ಕಾಯಬೇಕಾದ ಪರಿಸ್ಥಿತಿ ಇದೆಯೇ ವಿನಃ ಅಕ್ರಮವಾಗಿ ಅತಿಕ್ರಮಿಸಿದವರು ಕಾಯುವಂತಿಲ್ಲ ಎಂದು ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಜೆಸಿಬಿಗಳ ಘರ್ಜನೆ – ರಸ್ತೆ ಬದಿಯ ಗೂಡಂಗಡಿಗಳ ತೆರವು

Share This Article