ಬಹುನಿರೀಕ್ಷಿತ ವಾರ್-2 (War-2) ಸಿನಿಮಾ ಟೀಸರ್‌ನಿಂದಲೇ (Teaser) ಕುತೂಹಲವನ್ನು ಹುಟ್ಟಿಸಿದೆ. ಆಗಸ್ಟ್ 14 ರಂದು ವಿಶ್ವದಾದ್ಯಂತ ತೆರೆಗೆ ಬರಲಿರುವ ಈ ಸಿನಿಮಾದ ಟ್ರೇಲರ್ ನೋಡುವ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿ ಮೂಡಿದೆ. ಆ ಬಗ್ಗೆ ಯಶ್ ರಾಜ್ ಫಿಲಂಸ್ ದಿನಾಂಕ ಘೋಷಣೆ ಮಾಡಿದೆ. ಇದೇ ಜುಲೈ 25ರಂದು ಚಿತ್ರದ ಟ್ರೇಲರ್ ರಿಲೀಸ್ ಮಾಡಲು ಮುಹೂರ್ತ ಫಿಕ್ಸ್ ಮಾಡಿದೆ ನಿರ್ಮಾಣ ಸಂಸ್ಥೆ.
ಜೂ.ಎನ್‌ಟಿಆರ್ (Jr NTR) ಹಾಗೂ ಹೃತಿಕ್ ರೋಷನ್ (Hrithik Roshan) ಇಂಡಸ್ಟ್ರಿಗೆ ಬಂದು 25 ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಸಿನಿಮಾದ ಟ್ರೇಲರ್ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ. ಈ ಹಿಂದೆ ಜೂ.ಎನ್‌ಟಿಆರ್ ಅವರ ಹುಟ್ಟುಹಬ್ಬದ ದಿನ ಚಿತ್ರದ ಟೀಸರ್ ರಿಲೀಸ್ ಆಗಿತ್ತು. ಇದೀಗ ಜುಲೈ 25ಕ್ಕೆ ಟ್ರೇಲರ್ ರಿಲೀಸ್ ಆಗಲಿದೆ. ಇದನ್ನೂ ಓದಿ: ಪೆದ್ದಿ ಚಿತ್ರಕ್ಕಾಗಿ ದೇಹ ಹುರಿಗೊಳಿಸಿದ ರಾಮ್ ಚರಣ್ : ಮತ್ತೆ ಶೂಟಿಂಗ್ ಶುರು
ಈ ಸಿನಿಮಾದ ನಿರ್ದೇಶನ ಮಾಡಿದ್ದಾರೆ ಅಯಾನ್ ಮುಖರ್ಜಿ. ವಿಶೇಷ ಅಂದ್ರೆ ಜೂ.ಎನ್‌ಟಿಆರ್ ಮೊದಲ ಬಾರಿಗೆ ಹಿಂದಿ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಹೀಗಾಗಿ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಈ ಮೊದಲು ವಾರ್ ಸಿನಿಮಾದಲ್ಲಿ ಹೃತಿಕ್ ರೋಷನ್ ಹಾಗೂ ಟೈಗರ್ ಶ್ರಾಫ್ ಅಭಿನಯಿಸಿದ್ದರು.