ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ಅತ್ಯಾಚಾರಿಗಳ ಬಂಧನ

Public TV
1 Min Read

ಮೈಸೂರು: ಗ್ಯಾಂಗ್ ರೇಪ್ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿದ್ದ ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಸ್ಥಳದಲ್ಲಿ ಸಿಕ್ಕ ಬಿಯರ್ ಬಾಟ್ಲಿ, ತಳವಾಡಿಯ ಬಸ್ ಟಿಕೆಟ್ ಮತ್ತು ಯುವಕನ ಹೇಳಿಕೆ ಆಧರಿಸಿ ತನಿಖೆ ನಡೆಸಿದ್ದರು. ಘಟನೆ ನಡೆಯುವ ಮೂರು ದಿನಗಳ ಮುಂಚೆ ಮತ್ತು ಒಂದು ದಿನದ ಹಿಂದೆ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಘಟನಾ ಸ್ಥಳಕ್ಕೆ ಬಂದಿರುವುದನ್ನು ಕಾಮಕರು ಫಾಲೋ ಮಾಡಿದ್ದರು. ಘಟನೆ ನಡೆದ ದಿನದಿಂದ ಕಾಮುಕರು ಎಸ್ಕೇಪ್ ಆಗಿದ್ದರಿಂದಾಗಿ ಪೊಲೀಸರು ತನಿಖೆ ಮುಂದುವರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಮೈಸೂರು ಗ್ಯಾಂಗ್‍ರೇಪ್- ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ

ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾದವರಾಗಿದ್ದು, ಓರ್ವನನ್ನು ಚಾಮರಾಜನಗರದವನು ಎಂದು ಹೇಳಲಾಗುತ್ತಿದೆ. ಕೃತ್ಯ ನಡೆದ ಸ್ಥಳದಲ್ಲಿ ಆರೋಪಿಗಳು ನಿರಂತರವಾಗಿ ಓಡಾಡುತ್ತಿದ್ದರು. ಪ್ರಕರಣ ನಡೆದ ಸಂದರ್ಭದಲ್ಲಿ ಈ ಸ್ಥಳಕ್ಕೆ ಅಪರಿಚಿತರು ಬರಲು ಸಾಧ್ಯವಿಲ್ಲ ಯಾರು ಪರಿಚಿತರು ಮಾತ್ರ ಬರಲು ಸಾಧ್ಯ ಎಂಬ ಮಾಹಿತಿ ಮೇರೆಗೆ ತನಿಖೆಗೆ ಪೊಲೀಸರು ಮುಂದಾಗಿದ್ದರು. ಇತ್ತ ಯುವಕ ಹಾಗೂ ಯುವತಿ ಮೂರು ದಿನ ಅದೇ ಸ್ಥಳದಲ್ಲಿ ಕುಳಿತುಕೊಂಡು ಮಾತನಾಡುತ್ತಿರುವುದನ್ನು ಗಮನಿಸಿ, ನಾಲ್ಕನೇ ದಿನ ಕಾಮುಕರು ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಂಧಿತ ಐವರ ಮೇಲೆ ಹಳೆ ಕ್ರಿಮಿನಲ್ ಕೇಸ್ ಹಿನ್ನೆಲೆ ಪೊಲೀಸರು ತನಿಖೆ ಚುರುಕುಗೊಳಿಸಿ ಆರೋಪಿಗಳನ್ನು ಬಂಧಿಸಿ ಸತ್ಯಮಂಗಲದಿಂದ ಮೈಸೂರಿಗೆ ಕರೆತರುತ್ತಿದ್ದಾರೆ. ಇದನ್ನೂ ಓದಿ: ಮೈಸೂರು ಗ್ಯಾಂಗ್‍ರೇಪ್ ಪ್ರಕರಣ- ಆರೋಪಿಗಳೆಲ್ಲರೂ ಕೂಲಿಕಾರ್ಮಿಕರು!

Share This Article
Leave a Comment

Leave a Reply

Your email address will not be published. Required fields are marked *