ಮಠದಲ್ಲಿ ಹುಕ್ಕೇರಿ ಕೆಡಿಪಿ ಸಭೆ ನಡೆಸಿದ ಸಚಿವ ಸತೀಶ್‌ ಜಾರಕಿಹೊಳಿ

Public TV
1 Min Read

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕು ಮಟ್ಟದ ಕೆಡಿಪಿ ಸಭೆಯನ್ನು (KDP Meeting) ಸರಕಾರಿ ಕಚೇರಿ ಬಿಟ್ಟು ಮಠದಲ್ಲಿ ಸಚಿವ ಸತೀಶ ಜಾರಕಿಹೊಳಿ (Satish Jarkiholi) ಅಧಿಕಾರಿಗಳ ಸಭೆ ನಡೆಸಿ ಗಮನ ಸೆಳೆದಿದ್ದಾರೆ.

ಸರಕಾರಿ ಕಚೇರಿಗಳ ಸಭಾ ಭವನಗಳು ಇದ್ದರೂ ಹುಕ್ಕೇರಿ ಪಟ್ಟಣದ ಹೊರವಲಯದ ಅವಜೀಕರ ಆಶ್ರಮ ಮಠದಲ್ಲಿ ಸಭೆ ನಡೆಸಿದ್ದಾರೆ‌. ಸಭೆಯಲ್ಲಿ ಹುಕ್ಕೇರಿ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್‌ ಅಧ್ಯಕ್ಷರು ಹಾಗೂ ಸತೀಶ್‌ ಜಾರಕಿಹೊಳಿ ಅಭಿಮಾನಿಗಳು ಭಾಗಿಯಾಗಿದ್ದರು.

ಮಠದಲ್ಲಿ ಸಭೆ ಕರೆದ ವಿಚಾರದ ಸಚಿವರನ್ನು ಪ್ರಶ್ನಿಸಿದ್ದಕ್ಕೆ, ಸ್ಥಳದ ಅಭಾವದಿಂದ ಮಠದಲ್ಲಿ ಸಭೆ ಕರೆಯಲಾಗಿದೆ ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಜಾರಿಕೊಂಡಿದ್ದಾರೆ. ಇದನ್ನೂ ಓದಿ: ಚಾಮರಾಜಪೇಟೆ| ಕ್ಷುಲ್ಲಕ ಕಾರಣಕ್ಕೆ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಇಡಿ ದಾಳಿಗೂ ಸಿಎಂಗೂ ಸಂಬಂಧವಿಲ್ಲ. ಸಿಎಂ ಅವರ ಮೇಲೆ ಇಡಿ ದಾಳಿ ಮಾಡಿಲ್ಲ. ಮುಡಾ ಮೇಲೆ ಇಡಿ ದಾಳಿಯಾಗಿದೆ. ಮುಡಾ ಮೇಲೆ ತನಿಖೆ ನಡೆಯಬೇಕು ಎನ್ನುವದು ನಮ್ಮದು ವಾದವಿದೆ. ಇಡಿ ದಾಳಿಗೂ ಸಿಎಂ ರಾಜೀನಾಮೆ ನೀಡಬೇಕು ಎನ್ನುವುದು ಸರಿಯಲ್ಲ ಎಂದರು.

ಮುಡಾ ವಿಚಾರದಲ್ಲಿ ಯಾವುದೇ ಹಣದ ವ್ಯವಹಾರವಿಲ್ಲದ ಕಾರಣ ಇಡಿ ವ್ಯಾಪ್ತಿಯಲ್ಲಿ ಬರುವುದಿಲ್ಲ ಎನ್ನುವ ವಾದವಿದೆ. ಈ ಬಗ್ಗೆ ಸುಪ್ರೀಂ ಕೋರ್ಟ ಆದೇಶ ಮಾಡಬೇಕು. ಸಿಬಿಐ ತನಿಖೆಯಾದರೂ ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ಹೇಳಿದರು.

Share This Article